ಡಿಸಿಎಂ ಅಶ್ವತ್ಥನಾರಾಯಣಗೆ ಕೊರೋನಾ ಪಾಸಿಟಿವ್

ಉಪ ಮುಖ್ಯಮಂತ್ರಿ ಡಾ. ಸಿಎನ್ ಅಶ್ವತ್ಥನಾರಾಯಣ ಅವರಿಗೆ ಶನಿವಾರ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ.
ಡಾ. ಸಿ.ಎನ್. ಅಶ್ವತ್ಥ ನಾರಾಯಣ
ಡಾ. ಸಿ.ಎನ್. ಅಶ್ವತ್ಥ ನಾರಾಯಣ

ಬೆಂಗಳೂರು: ಉಪ ಮುಖ್ಯಮಂತ್ರಿ ಡಾ. ಸಿಎನ್ ಅಶ್ವತ್ಥನಾರಾಯಣ ಅವರಿಗೆ ಶನಿವಾರ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಡಿಸಿಎಂ ಅಶ್ವತ್ಥನಾರಾಯಣ ಅವರು, ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಇಂದು ಕೋವಿಡ್-19 ಪರೀಕ್ಷೆಗೆ ಒಳಪಟ್ಟಿದ್ದು, ಪಾಸಿಟಿವ್ ದೃಢಪಟ್ಟಿದೆ. ಆದರೆ ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದೂ ಡಿಸಿಎಂ ಟ್ವಿಟರ್‌ನಲ್ಲಿ ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com