ಬೇಡಿಕೆಗಳಿಗೆ ಒಪ್ಪಿದ ರಾಜ್ಯ ಸರ್ಕಾರ: ವೈದ್ಯ ಸಂಘಟನೆಗಳ ಮುಷ್ಕರ ವಾಪಸ್

ರಾಜ್ಯದಲ್ಲಿ ಕೊರೋನಾ ಮಹಾಮಾರಿ ಆರ್ಭಟ ಅಟ್ಟಹಾಸ ಮೆರೆಯುತ್ತಿದ್ದರೂ. ಈ ನಡುವಲ್ಲೇ ಮುಷ್ಕರ ಕೈಗೊಂಡಿದ್ದ ವೈದ್ಯರ ಸಂಘಟನೆಗಳು, ಬೇಡಿಕೆಗಳನ್ನು ಈಡೇರಿಸುವುದಾಗಿ ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ಕೊನೆಗೂ ಕೈಬಿಟ್ಟಿವೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮಹಾಮಾರಿ ಆರ್ಭಟ ಅಟ್ಟಹಾಸ ಮೆರೆಯುತ್ತಿದ್ದರೂ. ಈ ನಡುವಲ್ಲೇ ಮುಷ್ಕರ ಕೈಗೊಂಡಿದ್ದ ವೈದ್ಯರ ಸಂಘಟನೆಗಳು, ಬೇಡಿಕೆಗಳನ್ನು ಈಡೇರಿಸುವುದಾಗಿ ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ಕೊನೆಗೂ ಕೈಬಿಟ್ಟಿವೆ. 

ವೇತನ ಪರಿಷ್ಕರಣೆಗೆ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ವೈದ್ಯರು ಸೆಪ್ಟಂಬರ್ 15 ರಿಂದ ಅಸಹಕಾರ ಚಳುವಳಿ ಆರಂಭಿಸಿದ್ದರು.

ಸೆಪ್ಟೆಂಬರ್ 21 ರಿಂದ ಒಪಿಡಿ ಬಂದ್ ಮಾಡಿ ಪ್ರತಿಭಟನೆ ಮಾಡಲು ನಿರ್ಧರಿಸಿದ್ದ ವೈದ್ಯರ ಜೊತೆಗೆ ಆರೋಗ್ಯ ಸಚಿವ ಶ್ರೀರಾಮುಲು ಮಾತುಕತೆ ನಡೆಸಿ ವೈದ್ಯರ ಬೇಡಿಕೆಗೆ ಒಪ್ಪಿಗೆ ಸೂಚಿಸಿದ್ದಾರೆ.

ವೈದ್ಯರ ವೇತನ ಪರಿಷ್ಕರಣೆ ಬೇಡಿಕೆಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದ್ದರಿಂದ ಮುಷ್ಕರ ಕೈಬಿಡಲು ವೈದ್ಯ ಸಂಘಟನೆಗಳು ಒಪ್ಪಿಗೆ ಸೂಚಿಸಿವೆ. 

ಈ ಕುರಿತಾಗಿ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಶ್ರೀರಾಮುಲು, ಜನಸಾಮಾನ್ಯರ ಹಿತ ಕಾಪಾಡಲು ಸರ್ಕಾರ ಯಾವತ್ತೂ ಬದ್ಧ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com