ಕುಡಿದ ಅಮಲಿನಲ್ಲಿ ಸ್ಯೂಟರ್ ಗೆ ಕಾರು ಡಿಕ್ಕಿ; ಸ್ಥಳದಲ್ಲೇ ಬೈಕ್ ಸವಾರ ದುರ್ಮರಣ

ಅಮಲಿನಲ್ಲಿ ತೇಲುತ್ತಿದ್ದ ವ್ಯಕ್ತಿಯೊಬ್ಬ ಸಿಗ್ನಲ್‌ನಲ್ಲಿ ನಿಂತಿದ್ದ ಸ್ಕೂಟರ್‌ ಮೇಲೆ ಕಾರು ಹತ್ತಿಸಿ, ಒಬ್ಬನ ಸಾವಿಗೆ ಕಾರಣವಾಗಿದ್ದಾನೆ. ಅಪಘಾತವೆಸಗಿದ ಆರೋಪಿಯನ್ನು ರೋಹಿತ್ ಕೇಡಿಯಾ ಎಂದು ಗುರುತಿಸಲಾಗಿದೆ. ಘಟನೆ ಸಂಭವಿಸದ ತಕ್ಷಣ ಆರೋಪಿ ರೋಹಿತ್ ಕೇಡಿಯಾನ ವಿಲ್ಸನ್ ಗಾರ್ಡನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೃತ ಕಿರಣ್
ಮೃತ ಕಿರಣ್

ಬೆಂಗಳೂರು: ಅಮಲಿನಲ್ಲಿ ತೇಲುತ್ತಿದ್ದ ವ್ಯಕ್ತಿಯೊಬ್ಬ ಸಿಗ್ನಲ್‌ನಲ್ಲಿ ನಿಂತಿದ್ದ ಸ್ಕೂಟರ್‌ ಮೇಲೆ ಕಾರು ಹತ್ತಿಸಿ, ಒಬ್ಬನ ಸಾವಿಗೆ ಕಾರಣವಾಗಿದ್ದಾನೆ. ಅಪಘಾತವೆಸಗಿದ ಆರೋಪಿಯನ್ನು ರೋಹಿತ್ ಕೇಡಿಯಾ ಎಂದು ಗುರುತಿಸಲಾಗಿದೆ. ಘಟನೆ ಸಂಭವಿಸದ ತಕ್ಷಣ ಆರೋಪಿ ರೋಹಿತ್ ಕೇಡಿಯಾನ ವಿಲ್ಸನ್ ಗಾರ್ಡನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ಶುರೆನ್ಸ್​ ಕಂಪನಿಯಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಕಿರಣ್ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಅಪಘಾತದ ವೇಳೆ ಮದ್ಯಪಾನ‌ ಮಾಡಿದ್ದ ರೋಹಿತ್ ಕೇಡಿಯಾ ಕುಡಿದು ವೇಗವಾಗಿ ವಾಹನ ಚಲಾಯಿಸಿ ಅಪಘಾತ ಮಾಡಿದ್ದ. 

ಸಿಸಿಟಿವಿಗಳ ಪರಿಶೀಲನೆ ನಡೆಸಿದ ಪೊಲೀಸರು ಕಾರು ಅಪಘಾತವೆಸಗಿದ ರೋಹಿತ್​ನನ್ನು ಬಂಧಿಸಿದ್ದಾರೆ. ಆರೋಪಿ ಡ್ರಗ್ಸ್ ಸೇವನೆ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಿಲ್ಸನ್‌ ಗಾರ್ಡನ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೆಂಗಳೂರಿನ ರಿಚ್​ಮಂಡ್ ರಸ್ತೆಯ ಸಿಗ್ನಲ್​ನಲ್ಲಿ ಈ ಘಟನೆ ನಡೆದಿತ್ತು.

ವಿಲ್ಸನ್‌ ಗಾರ್ಡನ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೊಪ್ಪಿಸಿ ನ್ಯಾಯಾಲಯ ಆದೇಶ ನೀಡಿದ

ರಿಚ್​ಮಂಡ್ ರಸ್ತೆಯ ಸಿಗ್ನಲ್​ನಲ್ಲಿ ನಿಂತಿದ್ದ ವಾಹನಗಳಿಗೆ ಹಿಂಬದಿಯಿಂದ ವೇಗವಾಗಿ ಬಂದು ಡಿಕ್ಕಿ ಹೊಡೆದ ಕಿಯಾ ಕಾರು ಚಾಲಕ ರೋಹಿತ್​ನಿಂದಾಗಿ ಕನಕನಪಾಳ್ಯದ ನಿವಾಸಿಯಾಗಿದ್ದ ಯುವಕ ಕಿರಣ್‌ ಮೃತಪಟ್ಟಿದ್ದಾನೆ. ನಿನ್ನೆ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಶುಕ್ರವಾರ ರಾತ್ರಿ ಕಂಠಪೂರ್ತಿ ಕುಡಿದು ಅಪಘಾತ ಮಾಡಿದ ರೋಹಿತ್​ ಮೈಮೇಲೆ ಪ್ರಜ್ಞೆ ಇಲ್ಲದಷ್ಟು ಕುಡಿದು ಕಾರು ಚಲಾಯಿಸುತ್ತಿದ್ದ. ರಿಚ್ಮಂಡ್ ಸರ್ಕಲ್ ಬಳಿ ನಿಂತಿದ್ದ ಡಿಯೊ ಬೈಕ್ ಹಾಗೂ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದ್ದ. ಡಿಕ್ಕಿ
ಹೊಡೆದ ಪರಿಣಾಮದಿಂದ ಕಾರಿನ ಮುಂಭಾಗದಲ್ಲಿ ನಿಂತಿದ್ದ ಕ್ವಿಡ್ ಕಾರಿಗೆ ಕಿರಣ್​ನ ಬೈಕ್ ಡಿಕ್ಕಿ ಹೊಡೆದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com