ಆಕ್ಸಿಜನ್ ಪೂರೈಕೆಗೆ ಹೈದರಾಬಾದ್, ಗುಜರಾತ್ ಕಂಪನಿಗಳೊಂದಿಗೆ ಒಡಂಬಡಿಕೆ: ಸಚಿವ ಸುಧಾಕರ್

ರಾಜ್ಯದ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆಗೆ ಹೈದರಾಬಾದ್ ಮತ್ತು ಗುಜರಾತ್ ಕಂಪನಿಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್
ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್

ತುಮಕೂರು: ರಾಜ್ಯದ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆಗೆ ಹೈದರಾಬಾದ್ ಮತ್ತು ಗುಜರಾತ್ ಕಂಪನಿಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ತುಮಕೂರಿನ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ 135ನೇ ವೈರಾಲಜಿ ಲ್ಯಾಬ್ ಉದ್ಘಾಟಿಸಿ ಮಾತನಾಡಿದ ಅವರು, ತುಮಕೂರು ಜಿಲ್ಲೆಯಲ್ಲಿ ಈಗ ಮೂರು ಅತ್ಯಾಧುನಿಕ ಲ್ಯಾಬ್ ಸ್ಥಾಪಿಸಲಾಗಿದ್ದು, ಪ್ರತಿ ದಿನ 2 ಸಾವಿರ ಪರೀಕ್ಷೆಯನ್ನು ಮಾಡಬಹುದಾಗಿದೆ ಎಂದರು. 
ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ ಕೊರೋನಾ ಸೋಂಕಿತರಿಗೆ ಮೀಸಲಿರಿಸಿರುವ ಐಸಿಯು ಬೆಡ್ ಹೆಚ್ಚಳಕ್ಕೆ ಕಾಲೇಜಿನ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ಮನವಿ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.

ಐಸಿಯು ಬೆಡ್ ಹೆಚ್ಚಳಕ್ಕೆ ಸರ್ಕಾರ ಎಲ್ಲ ರೀತಿಯ ಸಹಕಾರವನ್ನು ನೀಡಲಿದ್ದು, ಜನರಿಗೆ ಗುಣಾತ್ಮಕ ಚಿಕಿತ್ಸೆ ನೀಡುವುದು ಸರ್ಕಾರದ ಗುರಿಯಾಗಿದೆ ಎಂದು ಹೇಳಿದರು.

ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದಂತೆ ಈಗಾಗಲೇ ದರವನ್ನು ನಿಗದಿ ಮಾಡಿದ್ದೇವೆ. ಇದು ಪಾಲನೆ ಆಗುತ್ತಿಲ್ಲ ಎಂದರೆ ಖಾಸಗಿ ಆಸ್ಪತ್ರೆಗಳ ವಿರುದ್ಧ ಖಂಡಿತ ಕ್ರಮಕೈಗೊಳ್ಳಲಾಗುವುದು. ಕೋವಿಡ್ ಸಮಸ್ಯೆಯ ಜತೆ ಕೆಲವು ರೋಗಿಗಳಿಗೆ ಬಹು ಅಂಗಾಂಗ ವೈಫಲ್ಯವೂ ಆಗಿರುತ್ತದೆ. ಆಗ ಅದಕ್ಕೆ ಪ್ರತ್ಯೇಕ ಚಿಕಿತ್ಸಾ ವೆಚ್ಚವನ್ನು ಭರಿಸಬೇಕಾಗುತ್ತದೆ ಎಂದರು.

ಖಾಸಗಿ ಆಸ್ಪತ್ರೆಗಳು ಸರ್ಕಾರದ ನಿರ್ದೇಶನ ಮತ್ತು ಮಾರ್ಗಸೂಚಿಗಳ ಪ್ರಕಾರವೇ ನಡೆದುಕೊಳ್ಳಬೇಕು. ಕೊರೋನಾದ ಈ ಸಂದರ್ಭದಲ್ಲಿ ಎಲ್ಲರೂ ಮಾನವೀಯವಾಗಿ ನಡೆದುಕೊಳ್ಳಬೇಕು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com