ಕೋವಿಡ್ ನಿಯಮ ಉಲ್ಲಂಘಿಸುವ ಗಣ್ಯರ ವಿರುದ್ಧ ಕ್ರಮ ಕೈಗೊಳ್ಳದಿರುವುದರಿಂದ ಜನರಿಗೆ ತಪ್ಪು ಸಂದೇಶ ರವಾನೆ: ಸರ್ಕಾರಕ್ಕೆ ಹೈಕೋರ್ಟ್

ಕೊರೋನಾ ನಿಯಮ ಉಲ್ಲಂಘಿಸುವ ನಟರು ಹಾಗೂ ರಾಜಕಾರಣಿಗಳ ವಿರುದ್ಧ ಕ್ರಮ ಕೈಗೊಳ್ಳದಿರುವುದರಿಂದ ಜನರಿಗೆ ತಪ್ಪು ಸಂದೇಶ ರವಾನೆಯಾಗಲಿದೆಎಂದು ಸರ್ಕಾರಕ್ಕೆ ಹೈಕೋರ್ಟ್ ಹೇಳಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೊರೋನಾ ನಿಯಮ ಉಲ್ಲಂಘಿಸುವ ನಟರು ಹಾಗೂ ರಾಜಕಾರಣಿಗಳ ವಿರುದ್ಧ ಕ್ರಮ ಕೈಗೊಳ್ಳದಿರುವುದರಿಂದ ಜನರಿಗೆ ತಪ್ಪು ಸಂದೇಶ ರವಾನೆಯಾಗಲಿದೆಎಂದು ಸರ್ಕಾರಕ್ಕೆ ಹೈಕೋರ್ಟ್ ಹೇಳಿದೆ. 

ಕೋವಿಡ್-19 ಮಾರ್ಗಸೂಚಿಗಳ ಉಲ್ಲಂಘನೆ ಕುರಿತ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠ, ಕೊರೋನಾ ಪ್ರಕರಣಗಳು ಹೆಚ್ಚುತ್ತಿವೆ. ಈ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಆದರೆ,ಕಡ್ಡಾಯವಾಗಿ ಮಾಸ್ಕ್ ಧರಿಸುವ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮಗಳನ್ನು ಜಾರಿಗೊಳಿಸಲು ಸರ್ಕಾರ ವಿಫಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿತು. 

ಗಣ್ಯರಿಂದ ನಿಯಮ ಉಲ್ಲಂಘನಯಾಗುತ್ತಿದೆ. ಕೋವಿಡ್ ನಿಯಮ ಉಲ್ಲಂಘನೆ ಮಾಡುವ ನಟರು ಹಾಗೂ ಗಣ್ಯರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳದಿರುವುದು ಜನರಿಗೆ ತಪ್ಪು ಸಂದೇಶ ರವಾನೆ ಮಾಡಿದಂತಾಗುತ್ತದೆ. ನಿಯಮ ಉಲ್ಲಂಘಿಸುವ ಪ್ರತೀಯೊಬ್ಬರ ವಿರುದ್ಧವು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿತು. 

ಧಾರ್ಮಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮ ಕಟ್ಟುನಿಟ್ಟಾಗಿ ಪಾಲನೆಯಾಗುತ್ತಿದೆಯೇ ಎಂದು ಸಂಬಂಧಪಟ್ಟ ಅಧಿಕಾರಿಗಳು ಆಗಾಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಇದೇ ವೇಳೆ ಸರ್ಕಾರಕ್ಕೆ ನಿರ್ದೇಶಿಸಿತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com