ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್‌ಗೆ ಕೊರೊನಾ ಸೋಂಕು

ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

Published: 19th September 2020 01:20 PM  |   Last Updated: 19th September 2020 01:20 PM   |  A+A-


pramod muthalik

ಪ್ರಮೋದ್ ಮುತಾಲಿಕ್

Posted By : Shilpa D
Source : Online Desk

ಬೆಂಗಳೂರು: ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ರಾಜ್ಯದ ಹಲವೆಡೆ ಪ್ರವಾಸ ಕೈಗೊಂಡಿರುವ ಸಮಯದಲ್ಲಿ ಅವರು ಜ್ಚರದಿಂದ ಬಳಲುತ್ತಿದ್ದರು. ಹೀಗಾಗಿ ಕೋವಿಡ್ ಪರೀಕ್ಷೆಗೆ ಒಳಗಾದಾಗ ಸೋಂಕು ತಗುಲಿರುವುದು ಪತ್ತೆಯಾಗಿದೆ. 

ಬೆಂಗಳೂರಿನ ಯಲಹಂಕದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಪ್ರಮೋದ್ ಮುತಾಲಿಕ್ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಇತ್ತೀಚೆಗೆ ಮೈಸೂರು ಸಂಸದ ಪ್ರತಾಪ ಸಿಂಹ ಸೇರಿದಂತೆ ಹಲವರನ್ನು ಭೇಟಿಯಾಗಿದ್ದರು. ರಾಜ್ಯದಲ್ಲಿನ ಆಗುಹೋಗುಗಳ ಬಗ್ಗೆ ಸಮಾಲೋಚನೆ ನಡೆಸಿದ್ದರು.

ಸತತ ಪ್ರಯಾಣದಿಂದ ಜ್ವರ ಬಂದಿದೆ ಎನ್ನಲಾಗಿತ್ತು. ಆದರೂ ಮುಂಜಾಗ್ರತಾ ಕ್ರಮವಾಗಿ ತಪಾಸಣೆಗೆ ಒಳಗಾದಾಗ ಸೋಂಕಿರುವುದು ಪತ್ತೆಯಾಗಿದೆ.
 

Stay up to date on all the latest ರಾಜ್ಯ news
Poll
Mamata1

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪಕ್ಷಕ್ಕೆ ಗೆಲುವು: ಮಮತಾ ಬ್ಯಾನರ್ಜಿ ಈಗ ಭಾರತದ ಪ್ರಬಲ ಪ್ರತಿಪಕ್ಷ ನಾಯಕಿಯೇ?


Result
ಹೌದು, ನಿರ್ವಿವಾದವಾಗಿ.
ಇಲ್ಲ, ಪ್ರಾದೇಶಿಕ ನಾಯಕಿ ಅಷ್ಟೇ.
flipboard facebook twitter whatsapp