ಕೋವಿಡ್-19: ಒಂದೇ ದಿನ 10,815 ಮಂದಿ ಆಸ್ಪತ್ರೆಯಿಂದ ಡಿಸ್'ಚಾರ್ಜ್, ರಾಜ್ಯದಲ್ಲಿ 4 ಲಕ್ಷ ಗಡಿ ದಾಟಿದ ಗುಣಮುಖರ ಸಂಖ್ಯೆ

ರಾಜ್ಯದಲ್ಲಿ ಶನಿವಾರ ಒಂದೇ ದಿನ 10,815 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗುವುದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರಲ್ಲಿ ಇದೂವರೆಗೆ 4,04,841 ಮಂದಿ ಗುಣಮುಖರಾದಂತಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಶನಿವಾರ ಒಂದೇ ದಿನ 10,815 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗುವುದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರಲ್ಲಿ ಇದೂವರೆಗೆ 4,04,841 ಮಂದಿ ಗುಣಮುಖರಾದಂತಾಗಿದೆ. 

ಸಕ್ರಿಯ ಸೋಂಕಿತರ ಸಂಖ್ಯೆ 1 ಲಕ್ಷಕ್ಕಿಂತ ಕೆಳಗೆ ಇಳಿದಿದೆ. ಈ ಮೂಕ 98,564 ಸಕ್ರಿಯ ಸೋಂಕಿತರು ವಿವಿಧ ಆಸ್ಪತ್ರೆಗಳು, ಕೋವಿಡ್ ನಿಗಾ ಕೇಂದ್ರ ಹಾಗೂ ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಶನಿವಾರ ರಾಜ್ಯದ್ಯಂತ ಒಟ್ಟು 63784 ಕೊರೋನಾ ಪರೀಕ್ಷೆ ನಡೆಸಲಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತನ್ನ ವರದಿಯಲ್ಲಿ ಮಾಹಿತಿ ನೀಡಿದೆ. 

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 8,364 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸಂಖ್ಯೆ 5,11,346ಕ್ಕೆ ಏರಿಕೆಯಾಗಿದೆ.

ಒಂದೇ ದಿನ 10,815 ಮಂಧಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಈವರೆಗೆ 4,04,841 ಮಂದಿ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದು ಲಕ್ಷಕ್ಕಿಂತ ಕಡಿಮೆ ಇದ್ದು, 98,564 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 822 ಮಂದಿ ತೀವ್ರ ನಿಗಾಘಟಕದಲ್ಲಿದ್ದಾರೆ. ಒಂದೇ ದಿನ 114 ಮಂದಿ ಮೃತಪಟ್ಟಿದ್ದು, ಸೋಂಕಿನಿಂದ ಈವರೆಗೆ 7,922 ಸಾವಿಗೀಡಾಗಿದ್ದಾರೆ.

ಬೆಂಗಳೂರು ನಗರದಲ್ಲಿ 3,733 ಸೋಂಕು ಪತ್ತೆಯಾಗಿದ್ದು, ಬೀದರ್ 23, ಚಾಮರಾಜನಗರ 72, ಚಿಕ್ಕಬಳ್ಳಾಪುರ 89, ಚಿಕ್ಕಮಗಳೂರು 165, ಚಿತ್ರದುರ್ಗ 84, ದಕ್ಷಿಣ ಕನ್ನಡ 432, ದಾವಣಗೆರೆ 163, ಧಾರವಾಡ 264, ಗದಗ 391, ಹಾಸನ 19, ಹಾವೇರಿ 107, ಕಲಬುರಗಿ 110, ಕೊಡಗು 38, ಕೋಲಾರ 91, ಕೊಪ್ಪಳ 96, ಮಂಡ್ಯ 94, ಮೈಸೂರು 626, ರಾಯಚೂರು 156, ರಾಮನಗರ 47, ಶಿವಮೊಗ್ಗ 106, ತುಮಕೂರು 159, ಉಡುಪಿ 215, ಉತ್ತರ ಕನ್ನಡ 129, ವಿಜಯಪುರ 87 ಮತ್ತು ಯಾದಗಿರಿ ಜಿಲ್ಲೆಯಲ್ಲಿ 127 ಸೋಂಕು ಪತ್ತೆಯಾಗಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com