ಮಂಡ್ಯದಲ್ಲಿ ಮತ್ತೆ 94 ಮಂದಿಗೆ ಕೊರೊನಾ ಪಾಸಿಟಿವ್, 9 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

ಮಂಡ್ಯ ಜಿಲ್ಲೆಯಲ್ಲಿ ಶನಿವಾರ ಮತ್ತೆ 94 ಮಂದಿಗೆ ಕೊರೊನಾ ಸೋಂಕು ದೃಢ ಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 9 ಸಾವಿರ ಗಡಿದಾಟಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಶನಿವಾರ ಮತ್ತೆ 94 ಮಂದಿಗೆ ಕೊರೊನಾ ಸೋಂಕು ದೃಢ ಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 9 ಸಾವಿರ ಗಡಿದಾಟಿದೆ.

ಜಿಲ್ಲೆಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 9001ಕ್ಕೆ ಏರಿಕೆಯಾಗಿದ್ದು, ಈ ಪೈಕಿ 7324 ಮಂದಿ ಗುಣಮುಖರಾಗಿದ್ದಾರೆ, 1585 ಸಕ್ರಿಯಪ್ರಕರಣಗಳಿದ್ದು, ಸೋಂಕಿನಿಂದ ಶನಿವಾರ ಒಟ್ಟು 412 ಮಂದಿ ಗುಣಮುಖರಾಗಿದ್ದಾರೆ. ಅಂತೆಯೇ ಶನಿವಾರ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದು  ಆ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 92 ಕ್ಕೇರಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇನ್ನು ರಾಜ್ಯದಲ್ಲಿ ಶನಿವಾರ ಒಟ್ಟಾರೆ 8364 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು, ಆ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,11,346ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ 114 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಆ ಮೂಲಕ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 7922ಕ್ಕೆ ಏರಿಕೆಯಾಗಿದೆ.  ಅಂತೆಯೇ ರಾಜ್ಯಾದ್ಯಂತ ನಿನ್ನೆ 10815 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 4,04841ಕ್ಕೆ ಏರಿಕೆಯಾಗಿದೆ. 98,564 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 822 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ  ತಿಳಿಸಿದೆ.

-ನಾಗಯ್ಯ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com