ಲಂಪಿಸ್ಕಿನ್ ಹತೋಟಿಯಲ್ಲಿ ನಿರ್ಲಕ್ಷ್ಯ ತೋರುವ ವೈದ್ಯರ ಮೇಲೆ ನಿರ್ದಾಕ್ಷಿಣ್ಯ ಕ್ರಮ- ಸಚಿವ ಪ್ರಭು ಚವ್ಹಾಣ್

ಜಾನುವಾರುಗಳಿಗೆ ವ್ಯಾಪಿಸಿರುವ ಲಂಪಿಸ್ಕಿನ್ ಸೋಂಕು ಹತೋಟಿಯಲ್ಲಿ ಅಧಿಕಾರಿಗಳು ನಿರ್ಲಕ್ಷ ತೋರಿದ ಬಗ್ಗೆ ರೈತರು ಹಾಗೂ ಪಶುಪಾಲಕರು ದೂರು ನೀಡುತ್ತಿದ್ದು, ಕರ್ತವ್ಯ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ  ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ವಿರುದ್ಧ ಕಿಡಿ ಕಾರಿದ್ದಾರೆ.
ಸಚಿವ ಪ್ರಭು ಚವ್ಹಾಣ್
ಸಚಿವ ಪ್ರಭು ಚವ್ಹಾಣ್

ಬೆಂಗಳೂರು: ಜಾನುವಾರುಗಳಿಗೆ ವ್ಯಾಪಿಸಿರುವ ಲಂಪಿಸ್ಕಿನ್ ಸೋಂಕು ಹತೋಟಿಯಲ್ಲಿ ಅಧಿಕಾರಿಗಳು ನಿರ್ಲಕ್ಷ ತೋರಿದ ಬಗ್ಗೆ ರೈತರು ಹಾಗೂ ಪಶುಪಾಲಕರು ದೂರು ನೀಡುತ್ತಿದ್ದು, ಕರ್ತವ್ಯ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ  ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ವಿರುದ್ಧ ಕಿಡಿ ಕಾರಿದ್ದಾರೆ.

ರೋಗ ಹೆಚ್ಚಿರುವ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಿಂದ ಹೆಚ್ಚು ಕರೆಗಳು ಬರುತ್ತಿದ್ದು ಪಶುವೈದ್ಯರು ನಿರ್ಲಕ್ಷ ತೋರುತ್ತಿರುವುದಾಗಿ ತಿಳಿದು ಬಂದಿದೆ.ಈ ಕುರಿತು ಪಶುಸಂಗೋಪನೆ ಇಲಾಖೆಯ ಕಾರ್ಯದರ್ಶಿ, ಆಯುಕ್ತರು ಹಾಗೂ ನಿರ್ದೇಶಕರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದಿದ್ದಾರೆ.

ರಾಜ್ಯದ ೧೨ ಜಿಲ್ಲೆಗಳ ೩೯ ತಾಲ್ಲೂಕುಗಳಲ್ಲಿ ಸುಮಾರು ೨೨೦೩೦ ಜಾನುವಾರುಗಳಲ್ಲಿ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದು, ‘ಲಂಪಿಸ್ಕಿನ್’ ರೋಗದಿಂದ ಜಾನುವಾರುಗಳ ಆರೋಗ್ಯ ಹದಗೆಡುತ್ತಿರುವ ಬಗ್ಗೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಮಾಹಿತಿ ಬರುತ್ತಿದೆ.ಹೀಗಾಗಿ ಇಲಾಖೆಯ ಕಾರ್ಯದರ್ಶಿ ನೇತೃತ್ವದಲ್ಲಿ ತಂಡ ರಚಿಸಿ ರೋಗ ಹತೋಟಿಗೆ ಕ್ರಮ ಕೈಗೊಳ್ಳಲು ಸೂಚನೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com