ವೇತನ ತಾರತಮ್ಯ, ಇತರೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ.24ರಿಂದ ಗುತ್ತಿಗೆ ಕಾರ್ಮಿಕರ ಮುಷ್ಕರ!

ಸಮಾನ ವೇತನ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಇದೇ ಸೆಪ್ಟೆಂಬರ್ 24 ರಿಂದ ಕೆಲಸ ಸ್ಥಗಿತಗೊಳಿಸಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಸಮಾನ ವೇತನ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಇದೇ ಸೆಪ್ಟೆಂಬರ್ 24 ರಿಂದ ಕೆಲಸ ಸ್ಥಗಿತಗೊಳಿಸಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.

ಉದ್ಯೋಗ ಖಾಯಂಗೊಳಿಸುವಿಕೆ, ಸಮಾನ ವೇತನ ಸೇರಿದಂತೆ 14 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ. ಈ ಹಿಂದೆ ಕೂಡ ಮುಷ್ಕರ ನಡೆಸಲಾಗಿತ್ತಾದರೂ ಸರ್ಕಾರ ಆಶ್ವಾಸನೆ ನೀಡಿದ ಹಿನ್ನಲೆಯಲ್ಲಿ ಮುಷ್ಕರ ವಾಪಸ್ ಪಡೆಯಲಾಗಿತ್ತು. 

ಈ ಬಗ್ಗೆ ಮಾತನಾಡಿರುವ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ವಿಶ್ವಾರಾಧ್ಯ ಯಮೋಜಿ ಅವರು, 'ಈ ಹಿಂದೆ ಕೂಡ ಮುಷ್ಕರ ನಡೆಸಲಾಗಿತ್ತಾದರೂ ಸರ್ಕಾರ ಆಶ್ವಾಸನೆ ನೀಡಿದ ಹಿನ್ನಲೆಯಲ್ಲಿ ಮುಷ್ಕರ ವಾಪಸ್ ಪಡೆಯಲಾಗಿತ್ತು. ಪರಿಣಾಮ ಸರ್ಕಾರವು ಬೇಡಿಕೆಗಳ ಪರಿಶೀಲನೆಗೆ ಸಮಿತಿ ರಚಿಸಿತ್ತು. ಆದರೆ, ಸಮಿತಿಯು ವರದಿ ಸಲ್ಲಿಸದೆ ನಿರ್ಲಕ್ಷ್ಯ ತೋರಿದೆ. ಇದರಿಂದ 30 ಸಾವಿರಕ್ಕೂ ಅಧಿಕ ನೌಕರರಿಗೆ ಅನ್ಯಾಯವಾಗಿದೆ. ಆದ್ದರಿಂದ ಸರ್ಕಾರದ ಕುರುಡು ನೀತಿಯನ್ನು ವಿರೋಧಿಸಿ ಸೆ.24ರಿಂದ ಕೆಲಸ ಸ್ಥಗಿತ ಮಾಡಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

ಮುಷ್ಕರದ ಪೂರ್ವಭಾವಿಯಾಗಿ ಸೋಮವಾರ (ಸೆ.21) ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು. ಮಂಗಳವಾರದಂದು (ಸೆ.22) ವಿವಿಧ ಆರೋಗ್ಯ ಕಾರ್ಯಕ್ರಮಗಳ ವರದಿ ಸಲ್ಲಿಸದೆ ಅಸಹಕಾರ ಚಳವಳಿ ನಡೆಸಲಾಗುವುದು. ನಮ್ಮ ಬೇಡಿಕೆ ಈಡೇರದ ಹೊರತು ನಾವು ಮುಷ್ಕರ ವಾಪಸ್ ಪಡೆಯುವುದಿಲ್ಲ ಎಂದು ಹೇಳಿದರು. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com