ಕೊರೊನಾ ಎಫೆಕ್ಟ್; ಆದಿಚುಂಚನಗಿರಿಯ ಜಾನಪದ ಕಲಾಮೇಳ ರದ್ದು

ನಾಗಮಂಗಲ ತಾಲೂಕಿನ ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ಪ್ರತಿ ವರ್ಷದಂತೆಯೇ ಈ ಬಾರಿಯೂ ನಡೆಯಬೇಕಿದ್ದ ರಾಜ್ಯಮಟ್ಟದ ಜಾನಪದ ಕಲಾಮೇಳವನ್ನು ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ರದ್ದು ಮಾಡಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮಂಡ್ಯ:  ನಾಗಮಂಗಲ ತಾಲೂಕಿನ ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ಪ್ರತಿ ವರ್ಷದಂತೆಯೇ ಈ ಬಾರಿಯೂ ನಡೆಯಬೇಕಿದ್ದ ರಾಜ್ಯಮಟ್ಟದ ಜಾನಪದ ಕಲಾಮೇಳವನ್ನು ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ರದ್ದು ಮಾಡಲಾಗಿದೆ.

ಈ ಕುರಿತು ಆದಿಚುಂಚನಗಿರಿ ಮಠದಿಂದ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದ್ದು, ಜನಪದ ಕಲೆ ಸಂಸ್ಕೃತಿಯ ಪುನರುತ್ಥಾನಕ್ಕಾಗಿ ಕಳೆದ ನಾಲ್ಕು ದಶಕಗಳಿಂದ ಪ್ರತಿವ? ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ರಾಜ್ಯಮಟ್ಟದ ಜಾನಪದ ಕಲಾ ಮೇಳವನ್ನು ಏರ್ಪಡಿಸುತ್ತಿತ್ತು. ಆದರೆ ಕೊರೊನಾ ವೈರಸ್ ಹಾವಳಿ ಹಿನ್ನೆಲೆ ಈ  ಬಾರಿ ಜಾನಪದ ಕಲಾಮೇಳವನ್ನು ರದ್ದು ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರತಿ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ದಿನಾಂಕ 23, 24 ಮತ್ತು 25 ಮೂರು ದಿನಗಳ ಕಾಲ ಈ ಕಲಾಮೇಳವನ್ನು ಏರ್ಪಡಿಸಲಾಗುತ್ತಿತ್ತು. ಇದರಲ್ಲಿ ರಾಜ್ಯಾದ್ಯಂತ ಆಗಮಿಸುವ ಸುಮಾರು 20 ಸಾವಿರಕ್ಕೂ ಹೆಚ್ಚು ಮಂದಿ ಕಲಾವಿದರು ಪಾಲ್ಗೊಳ್ಳುತ್ತಿದ್ದರು. ಈ ಮೂಲಕ ಅದ್ಧೂರಿಯಾಗಿ ಜಾನಪದ ಉತ್ಸವ ನಡೆಯುತ್ತಿತ್ತು.  ಈ ವರ್ಷ ಕೊರೊನಾ ವೈರಸ್ ಇಡೀ ವಿಶ್ವಾದ್ಯಂತ ಹರಡಿ ಜನರ ಆರೋಗ್ಯವನ್ನು ಕಾಡುತ್ತಿದೆ. ಹೀಗಾಗಿ ಜನರ ಆರೋಗ್ಯವನ್ನು ರಕ್ಷಿಸುವ ದೃಷ್ಟಿಯಿಂದ ಆದಿಚುಂಚನಗಿರಿ ಕ್ಷೇತ್ರದಲ್ಲಿ ಹಮ್ಮಿಕೊಳ್ಳಬೇಕಿದ್ದ ರಾಜ್ಯಮಟ್ಟದ ಜಾನಪದ ಕಲಾಮೇಳವನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಲಾಗಿದೆ.

- ನಾಗಯ್ಯ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com