ಈಡೇರದ ಬೇಡಿಕೆ: ಸೆಪ್ಟಂಬರ್ 23ರಂದು ಆಶಾ ಕಾರ್ಯಕರ್ತೆಯರಿಂದ ರಾಜ್ಯಮಟ್ಟದ ಪ್ರತಿಭಟನೆ

ತಮಗೆ ನೀಡುತ್ತಿರುವ ಗೌರವ ಧನವನ್ನು 12 ಸಾವಿರ ರು.ಗೆ  ಹೆಚ್ಚಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯಕರ್ತೆಯರು ಸೆಪ್ಟಂಬರ್ 23 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ .
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ತಮಗೆ ನೀಡುತ್ತಿರುವ ಗೌರವ ಧನವನ್ನು 12 ಸಾವಿರ ರು.ಗೆ  ಹೆಚ್ಚಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯಕರ್ತೆಯರು ಸೆಪ್ಟಂಬರ್ 23 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ .

ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಮತ್ತು ಮೈಸೂರಿನಿಂದ ಸುಮಾರು 500-600 ಆಶಾ ಕಾರ್ಯಕರ್ತೆಯರು ಬುಧವಾರ ನಡೆಯುವ ರಾಜ್ಯಮಟ್ಟದ ಪ್ರತಿಭಟನೆಯಲ್ಲಿ ಪಾಲ್ಗೋಳ್ಳಲಿದ್ದಾರೆ ಎಂದು ಎಐಟಿಯುಸಿ ಸದಸ್ಯ ದುರ್ಗೇಶ್ ಪ್ರಕಾಶ್ ತಿಳಿಸಿದ್ದಾರೆ.

ಕೊರೊನಾ ವಾರಿಯರ್ಸ್ ಎಂದೇ ಹೆಸರಾದ ರಾಜ್ಯದ 42 ಸಾವಿರ ಆಶಾ ಕಾರ್ಯಕರ್ತೆಯರು ಕಡಿಮೆ ಪ್ರೋತ್ಸಾಹ ಧನ ಪಡೆದು ಕೆಲಸ ಮಾಡುತ್ತಿದ್ದಾರೆ, ರಾಜ್ಯದ ಎಲ್ಲ ಆಶಾ ಕಾರ್ಯಕರ್ತೆಯರು ಮುಷ್ಕರ ಸ್ಥಗಿತಗೊಳಿಸಿ 50 ದಿನ ಕಳೆದರೂ ಸರ್ಕಾರದ ಕಡೆಯಿಂದ ಯಾವ ಅಧಿಕೃತ ಘೋಷಣೆಯೂ  ಬಂದಿಲ್ಲ. ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಸರ್ಕಾರ ಏನನ್ನೂ ಘೋಷಣೆ ಮಾಡಿಲ್ಲ.

ಮೇಲಿಂದ ಮೇಲೆ ಎಲ್ಲ ಆರೋಗ್ಯ ಎಲ್ಲ ಆರೋಗ್ಯ ಕಾರ್ಯಕರ್ತೆಯರ ಆರೋಗ್ಯ ತಪಾಸಣೆ  ಮಾಡಿಸಬೇಕು. ಮಾಸ್ಕ್, ಹ್ಯಾಂಡ್ ಗ್ಲೌಸ್, ಫೇಸ್ ಶೀಲ್ಡ್ ಮತ್ತು ಸ್ಯಾನಿಟೈಜರ್‌ಗಳನ್ನು ಸಮರ್ಪಕವಾಗಿ ನೀಡಬೇಕು. ಈಗಾಗಲೇ ಘೋಷಿಸಿರುವ  3 ಸಾವಿರ ರು. ಕೋವಿಡ್ ವಿಶೇಷ ಪ್ರೋತ್ಸಾಹಧನವನ್ನು ಇನ್ನೂ ತಲುಪದಿರುವ ಆಶಾಗಳಿಗೆ ಪಾವತಿಸುವಂತೆ ಕ್ರಮ ಕೈಗೊಳ್ಳಬೇಕು ಎಂಬುವು ಆಶಾ ಕಾರ್ಯಕರ್ತೆಯರ ಬೇಡಿಕೆಗಳಾಗಿವೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com