ಬೆಳಗಾವಿ: ಕೋವಿಡ್-19 ರೋಗಿ ಸಾವು; ಬಿಮ್ಸ್ ಆಸ್ಪತ್ರೆಯ ವೈದ್ಯರ ಮೇಲೆ ಸಂಬಂಧಿಕರಿಂದ ಹಲ್ಲೆ

ಬಿಮ್ಸ್ ಆಸ್ಪತ್ರೆಯ ಇಬ್ಬರು ವೈದ್ಯರು ಸೇರಿದಂತೆ  ನಾಲ್ವರು ಸಿಬ್ಬಂದಿ ಮೇಲೆ ಮೃತ ಕೊರೊನಾ ರೋಗಿ ಸಂಬಂಧಿಕರು ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಳಗಾವಿ: ಬಿಮ್ಸ್ ಆಸ್ಪತ್ರೆಯ ಇಬ್ಬರು ವೈದ್ಯರು ಸೇರಿದಂತೆ  ನಾಲ್ವರು ಸಿಬ್ಬಂದಿ ಮೇಲೆ ಮೃತ ಕೊರೊನಾ ರೋಗಿ ಸಂಬಂಧಿಕರು ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಮೃತ ರೋಗಿಯ ಸಂಬಂಧಿಕರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ, ಪರಿಸ್ಥಿತಿ ಕೈ ಮೀರುವ ಮುನ್ನ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಲಭೆಯನ್ನು ನಿಯಂತ್ರಿಸಿದ್ದಾರೆ.  ಹಲ್ಲೆ ಖಂಡಿಸಿ ತಡರಾತ್ರಿ ಆಸ್ಪತ್ರೆಯಿಂದ ಹೊರಬಂದ ವೈದ್ಯಕೀಯ ಸಿಬ್ಬಂದಿ ಪ್ರತಿಭಟನೆ ನಡೆಸಿ, ಹಲ್ಲೆ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು. 

ಆಸ್ಪತ್ರೆಯ ಬೇರೆ ರೋಗಿಗಳಿಗೆ ತೊಂದರೆಯಾಗಬಾರದೆಂದು ವೈದ್ಯಕೀಯ ಸಿಬ್ಬಂದಿ ತಮ್ಮ ಪ್ರತಿಭಟನೆ ವಾಪಸ್ ಪಡೆದರು. ಹಲ್ಲೆ ಮಾಡಿದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಮತ್ತೆ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದರು.

ಕೆಲ ದಿನಗಳ ಹಿಂದೆ ಕೊರೋನಾ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಆ್ಯಂಬುನೆಲ್ಸ್ ಗೆ ಬೆಂಕಿ ಹಚ್ಚಿದ ಘಟನೆ ನಡೆದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com