ರಾಜ್ಯದಲ್ಲಿ ಇಂದು ಕೊರೋನಾಗೆ 38 ಬಲಿ, ಬೆಂಗಳೂರಿನಲ್ಲಿ 3547 ಸೇರಿ 6997 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಬುಧವಾರ ಬರೋಬ್ಬರಿ 6997 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,40,847ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಬುಧವಾರ ಬರೋಬ್ಬರಿ 6997 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,40,847ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 38 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8266ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 23 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 38 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು 5,460 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 4,37,910ಕ್ಕೆ ಏರಿಕೆಯಾಗಿದೆ. 94,652 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 816 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3547 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 2,04, 275ಕ್ಕೆ ಏರಿಕೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com