ಕೆಎಸ್‌ಎಚ್‌ಡಿಸಿ ಹಣ ದುರುಪಯೋಗ: ವ್ಯಕ್ತಿಯ ಬಂಧನ

ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದಲ್ಲಿ (ಕೆಎಸ್‌ಎಚ್‌ಡಿಸಿ) ಹಣ ದುರುಪಯೋಗಪಡಿಸಿಕೊಂಡ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದಲ್ಲಿ (ಕೆಎಸ್‌ಎಚ್‌ಡಿಸಿ) ಹಣ ದುರುಪಯೋಗಪಡಿಸಿಕೊಂಡ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆ. 

ಹಣ ದುರುಪಯೋಗಪಡಿಸಿಕೊಂಡಿದ್ದಾರೆಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ನಾಗಲಿಂಗಸ್ವಾಮಿ ಹೆಚ್.ಎಸ್ ಎಂಬುವವರಿಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿತ್ತು. ಆದರೆ. ಇದಕ್ಕೆ ಯಾವುದೇ ಪ್ರತಿಕ್ರಿಯೆಗಳನ್ನು ನೀಡದ ಹಿನ್ನೆಲೆಯಲ್ಲಿ ಅಧಿಕಾರಿಗಳು ವ್ಯಕ್ತಿಯನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. 

ಬಂಧನಕ್ಕೊಳಗಾಗಿರುವ ನಾಗಲಿಂಗಸ್ವಾಮಿಯವರು ನಿಗಮಕ್ಕೆ ಕರಕುಶಲ ಸಾಮಾಗ್ರಿಗಳನ್ನು ಸರಬರಾಜು ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ. ಆರೋಪಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನಿಗಮದ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಎಂದು ಹೇಳಲಾಗುತ್ತಿದೆ. 

ಇದನ್ನು ಗಮನಿಸಿದ ಕೆಎಸ್‌ಎಚ್‌ಡಿಸಿ ಅಧಿಕಾರಿಗಳು ಕೂಡಲೇ ಪೊಲೀಸರಿಗೆ ನಾಗಲಿಂಗಸ್ವಾಮಿ ಹಾಗೂ ಅವರೊಂದಿಗೆ ಈ ಅಕ್ರಮದಲ್ಲಿ ಭಾಗಿಯಾಗಿದ್ದ ಇತರೆ ಸಹೋದ್ಯೋಗಿಗಳ ವಿರುದ್ಧ ದೂರು ನೀಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com