ಭಾರತೀಯ ಸೇನೆಯ ನೇಮಕಾತಿ ಪ್ರಾಧಿಕಾರ(ಬೆಂಗಳೂರು)ದಿಂದ ಅರ್ಜಿ ಆಹ್ವಾನ

ಭಾರತೀಯ ಸೇನೆಯ ನೇಮಕಾತಿ ಪ್ರಾಧಿಕಾರ ಬೆಂಗಳೂರು ವತಿಯಿಂದ ೨೦೨೦-೨೧ ನೇ ಸಾಲಿಗೆ ಅರ್ಹ ಪುರುಷ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲು ಆನ್‌ಲೈನ್‌ನಲ್ಲಿ www.joinindianarmy.nic.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಭಾರತೀಯ ಸೇನೆ
ಭಾರತೀಯ ಸೇನೆ

ಬೆಂಗಳೂರು: ಭಾರತೀಯ ಸೇನೆಯ ನೇಮಕಾತಿ ಪ್ರಾಧಿಕಾರ ಬೆಂಗಳೂರು ವತಿಯಿಂದ ೨೦೨೦-೨೧ ನೇ ಸಾಲಿಗೆ ಅರ್ಹ ಪುರುಷ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲು ಆನ್‌ಲೈನ್‌ನಲ್ಲಿ www.joinindianarmy.nic.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ನೇಮಕಾತಿ ರ‍್ಯಾಲಿಗಳು ಈಗಾಗಲೇ ಆರಂಭವಾಗಿದ್ದು, ಮಾರ್ಚ್ 31ರ ವರೆಗೆ ಮುಂದುವರೆಲಿದೆ. ಸರಿಯಾದ ದಿನಾಂಕ ಸ್ಥಳವನ್ನು ಕೋವಿಡ್ -19ರ ಪರಿಸ್ಥಿತಿಯನ್ನು ನೋಡಿಕೊಂಡು ಪ್ರಕಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ರಾಮನಗರ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ ಮತ್ತು ಚಿತ್ರದುರ್ಗ ಜಿಲ್ಲೆಯ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ೦೮೦-೨೫೫೯೬೫೧೭, ೦೮೦-೨೯೫೧೬೫೧೭ ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com