ಕೊರೋನಾ ನಿಯಂತ್ರಣದಲ್ಲಿ ಯಾವುದೇ ನಿರ್ಲಕ್ಷ್ಯ ಮಾಡಿಲ್ಲ, ಉಪಕರಣ ಖರೀದಿಯಲ್ಲಿ ಅವ್ಯವಹಾರ ನಡೆದಿಲ್ಲ: ಡಾ. ಸುಧಾಕರ್

ಕೊರೋನಾ ನಿಯಂತ್ರಣ ವಿಷಯದಲ್ಲಿ ರಾಜ್ಯ ಸರ್ಕಾರ ಯಾವುದೇ ನಿರ್ಲಕ್ಷ್ಯ ಮಾಡಿಲ್ಲ. ಮಾನವ ಮಾಡುವ ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇವೆ. ಈ ಸೋಂಕು ನಿಯಂತ್ರಣ ಕೇವಲ ಸರ್ಕಾರದಿಂದ ಮಾತ್ರ ಸಾಧ್ಯವಿಲ್ಲ. ಪ್ರತಿ ನಾಗರಿಕನ ಕರ್ತವ್ಯ.

Published: 23rd September 2020 03:04 PM  |   Last Updated: 23rd September 2020 05:13 PM   |  A+A-


K Sudhakar

ಕೆ. ಸುಧಾಕರ್

Posted By : Vishwanath S
Source : UNI

ಬೆಂಗಳೂರು: ಕೊರೋನಾ ನಿಯಂತ್ರಣ ವಿಷಯದಲ್ಲಿ ರಾಜ್ಯ ಸರ್ಕಾರ ಯಾವುದೇ ನಿರ್ಲಕ್ಷ್ಯ ಮಾಡಿಲ್ಲ. ಮಾನವ ಮಾಡುವ ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇವೆ. ಈ ಸೋಂಕು ನಿಯಂತ್ರಣ ಕೇವಲ ಸರ್ಕಾರದಿಂದ ಮಾತ್ರ ಸಾಧ್ಯವಿಲ್ಲ. ಪ್ರತಿ ನಾಗರಿಕನ ಕರ್ತವ್ಯ. ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಎಲ್ಲಷ್ಟೂ ಅವ್ಯವಹಾರ ನಡೆದಿಲ್ಲ. ವಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ, ಸತ್ಯಕ್ಕೆ ದೂರವಾದುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ವಿಧಾನಸಭೆಯಲ್ಲಿಂದು ಕೊರೊನಾ ವಿಷಯದ ಬಗ್ಗೆ ನಿಯಮ 69ರಡಿ ನಡೆದ ಚರ್ಚೆಗೆ ಸುದೀರ್ಘ ಎರಡೂವರೆ ಗಂಟೆ ಉತ್ತರಿಸಿದ ಅವರು, ಕಳೆದ ಏಳು ತಿಂಗಳಿಂದ ಯೋಧರ ರೀತಿಯಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಪೌರಕಾರ್ಮಿಕರು, ಅಧಿಕಾರಿಗಳು ಸೇರಿದಂತೆ ಹಲವರು ಕೆಲಸ ಮಾಡಿದ್ದಾರೆ, ಅವರೆಲ್ಲರಿಗೂ ಈ ಸಂದರ್ಭದಲ್ಲಿ ಸರ್ಕಾರದ ಪರವಾಗಿ ಧನ್ಯವಾದ ಅರ್ಪಿಸುತ್ತೇನೆ. ರಾಜ್ಯದಲ್ಲಿ ಕೊರೊನಾ ಸಾವಿನ ಪ್ರಮಾಣ ಶೇಕಡಾ 1.54ಕ್ಕೆ ಇಳಿಕೆಯಾಗಲು ಇವರ ಪ್ರಯತ್ನ ಇಲ್ಲದಿದ್ದರೆ ನಿಗ್ರಹ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಸಚಿವರು ಹೇಳಿದರು.

ಕೊರೊನಾ ನಿಯಂತ್ರಣದಲ್ಲಿ ಯಾವುದೇ ನಿರ್ಲಕ್ಷ್ಯ ಮಾಡಿಲ್ಲ, ಮಾನವ ಮಾಡುವ ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇವೆ; ಸುಧಾಕರ್
ಕೊರೊನಾ ನಿಯಂತ್ರಣ ವಿಷಯದಲ್ಲಿ ರಾಜ್ಯ ಸರ್ಕಾರ ಯಾವುದೇ ನಿರ್ಲಕ್ಷ್ಯ ಮಾಡಿಲ್ಲ. ಮಾನವ ಮಾಡುವ ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇವೆ. ಈ ಸೋಂಕು ನಿಯಂತ್ರಣ ಕೇವಲ ಸರ್ಕಾರದಿಂದ ಮಾತ್ರ ಸಾಧ್ಯವಿಲ್ಲ. ಪ್ರತಿ ನಾಗರಿಕನ ಕರ್ತವ್ಯ. ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಎಲ್ಲಷ್ಟೂ ಅವ್ಯವಹಾರ ನಡೆದಿಲ್ಲ. ವಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ, ಸತ್ಯಕ್ಕೆ ದೂರವಾದುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ವಿಧಾನಸಭೆಯಲ್ಲಿಂದು ಕೊರೊನಾ ವಿಷಯದ ಬಗ್ಗೆ ನಿಯಮ 69ರಡಿ ನಡೆದ ಚರ್ಚೆಗೆ ಸುದೀರ್ಘ ಎರಡೂವರೆ ಗಂಟೆ ಉತ್ತರಿಸಿದ ಅವರು, ಕಳೆದ ಏಳು ತಿಂಗಳಿಂದ ಯೋಧರ ರೀತಿಯಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಪೌರಕಾರ್ಮಿಕರು, ಅಧಿಕಾರಿಗಳು ಸೇರಿದಂತೆ ಹಲವರು ಕೆಲಸ ಮಾಡಿದ್ದಾರೆ, ಅವರೆಲ್ಲರಿಗೂ ಈ ಸಂದರ್ಭದಲ್ಲಿ ಸರ್ಕಾರದ ಪರವಾಗಿ ಧನ್ಯವಾದ ಅರ್ಪಿಸುತ್ತೇನೆ. ರಾಜ್ಯದಲ್ಲಿ ಕೊರೊನಾ ಸಾವಿನ ಪ್ರಮಾಣ ಶೇಕಡಾ 1.54ಕ್ಕೆ ಇಳಿಕೆಯಾಗಲು ಇವರ ಪ್ರಯತ್ನ ಇಲ್ಲದಿದ್ದರೆ ನಿಗ್ರಹ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಸಚಿವರು ಹೇಳಿದರು.

ಚೀನಾದ ಬಳಿಕ ಜನವರಿಯಲ್ಲಿ ಮೊದಲ ಬಾರಿಗೆ ಸೋಂಕು ಥೈಲಾಂಡ್ ನಲ್ಲಿ ಕಂಡುಬಂತು. ಬಳಿಕ ಫ್ರಾನ್ಸ್, ಸ್ಪೈನ್, ಯುಎಇ ಸೇರಿದಂತೆ ಇತರ ದೇಶಗಳಲ್ಲಿ ಕಾಣಿಸಿಕೊಂಡಿತು. ಚೈನಾದವರು ಸಮರ್ಪಕವಾಗಿ ಸೋಂಕಿನ ಹರಡುವಿಕೆಯನ್ನು ತಡೆದಿದ್ದರೆ 228 ದೇಶಗಳಿಗೆ ಇದು ಹರಡುತ್ತಿರಲಿಲ್ಲ. ಈಗ 228 ದೇಶಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. 3 ಕೋಟಿ ಗೂ ಹೆಚ್ಚು ಜನರಿಗೆ ಈ ಸೋಂಕು ತಗುಲಿದೆ. ಯಾವ ದೇಶವನ್ನೂ ಬಿಟ್ಟಿಲ್ಲ. ಆರೋಗ್ಯ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ದೇಶಗಳಲ್ಲೂ ಸೋಂಕು ಕಾಣಿಸಿಕೊಂಡಿದೆ. ಭಾರತದ ನಿಯಂತ್ರಣಾ ವ್ಯವಸ್ಥೆಯನ್ನು ವಿಶ್ವ ಆರೋಗ್ಯ ಸಂಸ್ಥೆಯವರು ಶ್ಲಾಘಿಸಿದ್ದಾರೆ ಎಂದರು.

Stay up to date on all the latest ರಾಜ್ಯ news
Poll
Rohit Sharma

ಮುಂಬರುವ ಆಸ್ಟ್ರೇಲಿಯಾ ಪ್ರವಾಸದಲ್ಲಿ ರೋಹಿತ್ ಶರ್ಮಾ ಅವರ ಅನುಪಸ್ಥಿತಿಯು ಟೀಮ್ ಇಂಡಿಯಾದ ಸಾಧನೆಯ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp