ವಾರ್ಡ್'ವಾರು ಅಂತಿಮ ಮೀಸಲಾತಿ ಪಟ್ಟಿ 14 ದಿನಗಳಲ್ಲಿ ಪ್ರಕಟ: ಹೈಕೋರ್ಟ್'ಗೆ ರಾಜ್ಯ ಸರ್ಕಾರ ಮಾಹಿತಿ

ಬಿಬಿಎಂಪಿ ವಾರ್ಡ್ ವಾರು ಅಂತಿಮ ಮೀಸಲಾತಿ ಪಟ್ಟಿಯನ್ನು ಇನ್ನೆರಡು ವಾರಗಳಲ್ಲಿ ಪ್ರಕಟಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್'ಗೆ ಮಂಗಳವಾರ ಮಾಹಿತಿ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಬಿಬಿಎಂಪಿ ವಾರ್ಡ್ ವಾರು ಅಂತಿಮ ಮೀಸಲಾತಿ ಪಟ್ಟಿಯನ್ನು ಇನ್ನೆರಡು ವಾರಗಳಲ್ಲಿ ಪ್ರಕಟಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್'ಗೆ ಮಂಗಳವಾರ ಮಾಹಿತಿ ನೀಡಿದೆ. 

ಈ ಕುರಿತು ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. 

ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ.ನಾವದಗಿ, ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ಅವರು ವಾದ ಮಂಡಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com