ಮಹಾಮಾರಿ ಕೊರೋನಾಗೆ ರಾಜ್ಯದಲ್ಲಿ ಇದುವರಗೆ 43 ವೈದ್ಯರು ಬಲಿ

ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮೆರೆಯುತ್ತಿದ್ದು, ಮಹಾಮಾರಿ ವೈರಸ್'ಗೆ ಈ ವರೆಗೂ ರಾಜ್ಯದಲ್ಲಿ 43 ವೈದ್ಯರು ಬಲಿಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮೈಸೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮೆರೆಯುತ್ತಿದ್ದು, ಮಹಾಮಾರಿ ವೈರಸ್'ಗೆ ಈ ವರೆಗೂ ರಾಜ್ಯದಲ್ಲಿ 43 ವೈದ್ಯರು ಬಲಿಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಮೈಸೂರು ಮೂಲಕ 66 ವರ್ಷದ ವೈದ್ಯರೊಬ್ಬರು ಹೆಮ್ಮಾರಿ ವೈರಸ್'ಗೆ ಬಲಿಯಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಒಟ್ಟಾರೆ 43 ಮಂದಿ ವೈದ್ಯರು ಸೋಂಕಿನಿಂದ ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ. 

ಮೈಸೂರಿನ ನಂಜನಗೂಡು ನಿವಾಸಿ 66 ವರ್ಷದ ಡಾ.ವೆಂಕಟೇಶ್ ಅವರು ಮಹಾಮಾರಿ ವೈರಸ್'ಗೆ ಬಲಿಯಾಗಿದ್ದಾರೆ. 

ಕೊರೋನಾ ಸೋಂಕು ಹಿನ್ನೆಲೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ  ಡಾ.ವೆಂಕಟೇಶ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವೆಂಕಟೇಶ್ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವೆಂಕಟೇಶ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು 43 ಮಂದಿ ವೈದ್ಯರು ಸೋಂಕಿನಿಂದ ಸಾವನ್ನಪ್ಪಿದ್ದಾರೆಂದು ಭಾರತೀಯ ವೈದ್ಯಕೀ ಸಂಘದ ವರದಿಗಳು ಮಾಹಿತಿ ನೀಡಿವೆ. 

43 ವೈದ್ಯರಲ್ಲಿ ಬೆಂಗಳೂರು ಹಾಗೂ ಮೈಸೂರು ಭಾಗದವರೇ ಹೆಚ್ಚು ಬಲಿಯಾಗಿದ್ದಾರೆಂದು ಹೇಳಲಾಗುತ್ತಿದ್ದು, ಇದರಲ್ಲಿ 21 ಮಂದಿ 60-69 ವಯಸ್ಸು ಹಾಗೂ ಐವರು 70 ವರ್ಷ ಮೇಲ್ಪಟ್ಟವರಾಗಿದ್ದಾರೆಂದು ತಿಳಿದುಬಂದಿದೆ. 

ಮೃತಪಟ್ಟಿರುವ ಬಹುತೇಕ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಿನ್ನೆಲೆಯಲ್ಲಿ ಹಲವರಿಗೆ ಸರ್ಕಾರ ಪರಿಹಾರವನ್ನು ನೀಡಿಲ್ಲ. ಇದರಿಂದ ವೈದ್ಯ ಸಂಘಟನೆ ಕೆಂಡಾಮಂಡಲಗೊಂಡಿದೆ. 

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಿಗೆ ವೈದ್ಯ ಸಂಘಟನೆ ಮನವಿ ಪತ್ರವನ್ನು ಸಲ್ಲಿಸಿದೆ. “ನಾವು ಮುಖ್ಯಮಂತ್ರಿ ಬಿ ಎಸ್ ಯಡಿಯುರಪ್ಪ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದ್ದೇವೆ, ಸರ್ಕಾರವು ಖಾಸಗಿ ವೈದ್ಯರನ್ನು ರಾಜ್ಯ ವಿಮಾ ರಕ್ಷಣೆಯಡಿ 50 ಲಕ್ಷ ರೂ.ಗಳ ಅಡಿಯಲ್ಲಿ ಸೇರ್ಪಡೆಗೊಳಿಸಬೇಕು ಎಂದು ಮನವಿ ಮಾಡಿದ್ದೇವ, ಆದರೆ ಈ ಬಗ್ಗೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆಗಳೂ ಬಂದಿಲ್ಲ. 7ನೇ ವೇತನ ಆಯೋಗದ ಮಾರ್ಗಸೂಚಿಗಳ ಪ್ರಕಾರ ಕರ್ತವ್ಯಕ್ಕೆ ಕರೆದ ವೈದ್ಯರಿಗೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆಂದು ಕರ್ನಾಟಕದ ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಮಧುಸೂಧನ ಕರಿಗನೂರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com