ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ: ತನಿಖೆ ಆರಂಭಿಸಿದ ಎನ್ಐಎ, 30ಕ್ಕೂ ಹೆಚ್ಚು ಕಡೆ ದಾಳಿ

ಬೆಂಗಳೂರಿನ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಹಲವೆಡೆ ರಾಷ್ಟ್ರೀಯ ತನಿಖಾ ದಳ-ಎನ್ಐಎ ಅಧಿಕಾರಿಗಳು ಇಂದು ಏಕಕಾಲಕ್ಕೆ ದಾಳಿ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ.
ಗಲಭೆ ಚಿತ್ರ
ಗಲಭೆ ಚಿತ್ರ

ಬೆಂಗಳೂರು: ಬೆಂಗಳೂರಿನ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಹಲವೆಡೆ ರಾಷ್ಟ್ರೀಯ ತನಿಖಾ ದಳ-ಎನ್ಐಎ ಅಧಿಕಾರಿಗಳು ಇಂದು ಏಕಕಾಲಕ್ಕೆ ದಾಳಿ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಗಲಭೆ ಪ್ರಕರಣದ ತನಿಖೆಯನ್ನು ಎನ್ ಐಎ ಕೈಗೆತ್ತಿಕೊಂಡಿತ್ತು. ಎನ್ಐ ಎ ಐಜಿ, ಡಿಐಜಿ, ಎಸ್ಪಿ ನೇತೃತ್ವದ ಅಧಿಕಾರಿಗಳ‌ ತಂಡವು ಬೆಳಿಗ್ಗೆಯಿಂದ 30 ಕಡೆ ದಾಳಿ ನಡೆಸಿತ್ತು. ಕೆಲವು ಪ್ರಮುಖ ಆರೋಪಿಗಳ ಮನೆ, ಕಚೇರಿಗಳಿಗೆ ದಾಳಿ ನಡೆಸಿದೆ. ಬಳಿಕ ಪೊಲೀಸ್ ಠಾಣೆಗೆ ಆಗಮಿಸಿ ಮಾಹಿತಿ ಸಂಗ್ರಹಿಸಿದೆ.

ಗಲಭೆ ಸಂಬಂಧ 300ಕ್ಕೂ ಹೆಚ್ಚು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು ಅವರ ವಿವರಗಳನ್ನು ಅಧಿಕಾರಿಗಳು ಸಂಗ್ರಹಿಸಿ ದಾಳಿ ನಡೆಸಿದ ಎನ್ಐಕಎ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ. 

ಆಗಸ್ಟ್ 11ರಂದು 3 ಸಾವಿರಕ್ಕೂ ಹೆಚ್ಚು ಗಲಭೆಕೋರರು ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ, ಅವರ ಸಹೋದರಿ ಜಯಂತಿ, ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆಗಳಿಗೆ ಬೆಂಕಿ ಹಾಕಿ ಹಿಂಸಾಚಾರ ನಡೆಸಿದ್ದರು. 

ಗಲಭೆ ವೇಳೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದು ನಾಲ್ವರು ಗಲಭೆಕೋರರು ಮೃತಪಟ್ಟಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com