ಶಾಸಕರು, ಸಂಸದರ ವಿರುದ್ಧದ ಕೇಸಿನ ವಿವರ ನೀಡಿ: ಸರ್ಕಾರಕ್ಕೆ ಹೈಕೋರ್ಟ್

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿಯಿರುವ ಸಂಸದರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಮಾಹಿತಿ ಸಂಗ್ರಹಿಸಿ ಸಲ್ಲಿಸಿರುವಂತೆ ರಿಜಿಸ್ಟ್ರಾರ್ ಜನರಲ್ ಅವರಿಗೆ ಹೈಕೋರ್ಟ್ ಬುಧವಾರ ನಿರ್ದೇಶನ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿಯಿರುವ ಸಂಸದರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಮಾಹಿತಿ ಸಂಗ್ರಹಿಸಿ ಸಲ್ಲಿಸಿರುವಂತೆ ರಿಜಿಸ್ಟ್ರಾರ್ ಜನರಲ್ ಅವರಿಗೆ ಹೈಕೋರ್ಟ್ ಬುಧವಾರ ನಿರ್ದೇಶನ ನೀಡಿದೆ. 

ಜನಪ್ರತಿನಿಧಿಗಳ ಮೇಲಿನ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ಪ್ರಗತಿಯ ಮೇಲ್ವಿಚಾರಣೆ ಮಾಡಲು ಸುಪ್ರೀಂಕೋರ್ಟ್ ನಿರ್ದೇಶನದಂತೆ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿತು. 

‘ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕಣಗಳ ವಿಚಾರಣೆ ನಡೆಸಲು ನಗರದ ಸಿಟಿ ಸಿವಿಲ್ ನ್ಯಾಯಾಲಯಗಳ ಆವರಣದಲ್ಲಿ ಒಂದು ವಿಶೇಷ ನ್ಯಾಯಾಲಯ ಮಾತ್ರ ಇದೆ. ಇಲ್ಲಿ ಬಾಕಿ ಇರುವ ಪ್ರಕರಣಗಳ ಸಂಖ್ಯೆ, ಅವು ಯಾವ ಹಂತದಲ್ಲಿವೆ ಎಂಬುದರ ವಿವರ ಸಲ್ಲಿಸಬೇಕು’ ಎಂದು ಪೀಠ ತಿಳಿಸಿತು.

ಸಾಕ್ಷ್ಯಗಳ ವಿಚಾರಣೆಗೆ ಸಂಬಂಧಿಸಿದಂತೆ ಹೊರಡಿಸಲಾದ ಮಾರ್ಗದರ್ಶಿ ಸೂತ್ರಗಳ (ಎಸ್‌ಒಪಿ) ಪ್ರಕಾರ ನ್ಯಾಯಾಲಯವನ್ನು ಮಾರ್ಪಡಿಸಬೇಕು. ಅಡ್ವೊಕೇಟ್ ಜನರಲ್ ಮತ್ತು ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗೆ ಸಹಾಯ ಮಾಡಲು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರನ್ನು ನೋಡಲ್ ಅಧಿಕಾರಿಯಾಗಿ ನೇಮಿಸುವಂತೆಯೂ ತಿಳಿಸಿದ ಪೀಠ, ಅ.5ಕ್ಕೆ ವಿಚಾರಣೆ ಮುಂದೂಡಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com