ಖಾಸಗಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಶೀಘ್ರದಲ್ಲೇ ಸರ್ಕಾರ ಆದೇಶ

ರಾಜ್ಯ ಸರ್ಕಾರದಿಂದ ಯಾವುದೇ ರಿಯಾಯಿತಿಯನ್ನು ಪಡೆಯದ ಖಾಸಗಿ ಸಂಸ್ಥೆಗಳೂ ಕೂಡ ತಮ್ಮಲ್ಲಿನ ಸಿ ಮತ್ತು ಡಿ ವೃಂದದಲ್ಲಿನ ಎಲ್ಲಾ ಉದ್ಯೋಗಗಳನ್ನು ಕನ್ನಡಿಗರಿಗೆ ಮೀಸಲಿಡುವಂತೆ ಹಾಲಿ ಜಾರಿ ಇರುವ ಆದೇಶವನ್ನು ಅನ್ವಯಿಸುವ ಬಗ್ಗೆ ಸರ್ಕಾರ ಚಿಂತನೆ ಮಾಡುತ್ತಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ. 
ಸದನದಲ್ಲಿ ಮಾತನಾಡುತ್ತಿರುವ ಸಚಿವ ಮಾಧುಸ್ವಾಮಿ
ಸದನದಲ್ಲಿ ಮಾತನಾಡುತ್ತಿರುವ ಸಚಿವ ಮಾಧುಸ್ವಾಮಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಯಾವುದೇ ರಿಯಾಯಿತಿಯನ್ನು ಪಡೆಯದ ಖಾಸಗಿ ಸಂಸ್ಥೆಗಳೂ ಕೂಡ ತಮ್ಮಲ್ಲಿನ ಸಿ ಮತ್ತು ಡಿ ವೃಂದದಲ್ಲಿನ ಎಲ್ಲಾ ಉದ್ಯೋಗಗಳನ್ನು ಕನ್ನಡಿಗರಿಗೆ ಮೀಸಲಿಡುವಂತೆ ಹಾಲಿ ಜಾರಿ ಇರುವ ಆದೇಶವನ್ನು ಅನ್ವಯಿಸುವ ಬಗ್ಗೆ ಸರ್ಕಾರ ಚಿಂತನೆ ಮಾಡುತ್ತಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ. 

ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ ಅವರು ಡಾ.ಸರೋಜಿನ ಮಹಿಷಿ ಪರಿಷ್ಕೃತ ವರದಿಯನ್ವಯ ಖಾಸಗಿ ಸಂಸ್ಥೆಗಳಲ್ಲಿನ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಸದನದಲ್ಲಿ ಮಂಡಿಸಬೇಕೆಂಬ ಸಲಹೆಗೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರಿ ಸೌಲಭ್ಯ ಪಡೆಯದ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಿಡುವ ಬಗ್ಗೆ ರಾಜ್ಯ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನಕ್ಕೆ ಬರುತ್ತೇವೆ. ಆಂಧ್ರದಲ್ಲಿ ಸ್ಥಳೀಯರಿಗೆ ಉದ್ಯೋಗ ಕಲ್ಪಿಸುವ ಕಾಯ್ದೆ ಜಾರಿಯಲ್ಲಿದ್ದು, ಕಾಯ್ದೆಯನ್ನು ತರಿಸಿಕೊಂಡು ಅಧ್ಯಯನ ನಡೆಸುತ್ತಿದ್ದೇವೆಂದು ಹೇಳಿದರು. 

ಈಗಾಗಲೇ ರಾಜ್ಯ ಸರ್ಕಾರದಿಂದ ಸವಲತ್ತು ಅಥವಾ ರಿಯಾಯಿತಿ ಪಡೆದಿರುವ ಎಲ್ಲಾ ಸಂಸ್ಥೆಗಳು ತಮ್ಮಲ್ಲಿನ ಸಿ ಮತ್ತು ಡಿ ವೃಂದದಲ್ಲಿನ ಎಲ್ಲಾ ಉದ್ಯೋಗವನ್ನು ಕನ್ನಡಿಗರಿಗೆ ಮೀಸಲಿಡಬೇಕು ಎಂದು ಆದೇಶ ಹೊರಡಿಸಿಲಾಗಿದೆ. ಅಷ್ಟೇ ಅಲ್ಲ ಎ ಮತ್ತು ಬಿ ವೃಂದದ ಹುದ್ದೆಗಳಲ್ಲಿಯೂ ಕನ್ನಡಿಗರಿಗೆ ಆದ್ಯತೆ ನೀಡಬೇಕು ಎಂದು ಸೂಚಿಸಲಾಗಿದೆ. ಆಧರೆ, ಅಸಂಘಟಿತ ವಲಯಕ್ಕೆ ಸಂಬಂಧಿಸಿದಂತೆ ನಮ್ಮ ಮುಂದೆ ಯಾವುದೇ ವರದಿಗಳಿಲ್ಲ. ಆದ್ದರಿಂದ ಆ ವಲಯದ ಬಗ್ಗೆ ನಾವು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಿಳಿಸಿದರು. 

ಕರ್ನಾಟಕದಲ್ಲಿ 15 ವರ್ಷ ವಾಸಿಸಿದವರನ್ನು ಕನ್ನಡಿಗರು ಎನ್ನಬೇಕೆ ಅತವಾ 1 ರಿಂದ 10ವರೆಗೆ ಕನ್ನಡವನ್ನು ಐಚ್ಛಿಕವಾಗಿಯಾದರೂ ಅಧ್ಯಯನ ನಡೆಸಿದವರನ್ನು ಮಾತ್ರ ಕನ್ನಡಿಗರು ಎಂದು ಪರಿಗಣಿಸಬೇಕೇ ಎಂಬುದರ ಬಗ್ಗೆಯೂ ಸದಸ್ಯರು ತುಸು ಚರ್ಚೆ ನಡೆಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com