ಪಾರ್ಥೀವ ಶರೀರ ತರಲು ನಿಯಮ ಅಡ್ಡಿ: ದೆಹಲಿಯಲ್ಲಿಯೇ ಸುರೇಶ್ ಅಂಗಡಿ ಅಂತ್ಯಕ್ರಿಯೆ

ಕೋವಿಡ್‌ನಿಂದ ನವದೆಹಲಿಯ ಏಮ್ಸ್‌ ಅಸ್ಪತ್ರೆಯಲ್ಲಿ ಬುಧವಾರ ನಿಧನರಾದ ಸಂಸದ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಅಂತ್ಯಕ್ರಿಯೆಯನ್ನು ದೆಹಲಿಯಲ್ಲೇ ನಡೆಸಲು ನಿರ್ಧರಿಸಲಾಗಿದೆ
ಸುರೇಶ್ ಅಂಗಡಿ
ಸುರೇಶ್ ಅಂಗಡಿ

ಬೆಳಗಾವಿ: ಕೋವಿಡ್‌ನಿಂದ ನವದೆಹಲಿಯ ಏಮ್ಸ್‌ ಅಸ್ಪತ್ರೆಯಲ್ಲಿ ಬುಧವಾರ ನಿಧನರಾದ ಸಂಸದ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಅಂತ್ಯಕ್ರಿಯೆಯನ್ನು ದೆಹಲಿಯಲ್ಲೇ ನಡೆಸಲು ನಿರ್ಧರಿಸಲಾಗಿದೆ.

ಹಲಿಯಲ್ಲಿ ಮೃತರಾಗಿರುವ ಸಚಿವರ ದೇಹವನ್ನು  ಬೆಳಗಾವಿಗೆ ತರಲು ಈಗ ಕೊರೋನಾ ನಿಯಮಗಳು ಅಡ್ಡಿಯಾಗಿದೆ. ಸೋಂಕಿತರು ಎಲ್ಲಿ ಸಾವನ್ನಪ್ಪುತ್ತಾರೋ ಅಲ್ಲಿಯೇ ಅಂತ್ಯ ಸಂಸ್ಕಾರ ಮಾಡಬೇಕು ಎಂಬ ನಿಯಮವಿರುವ ಹಿನ್ನಲೆ ಅವರ ಶರೀರವನ್ನು ಹುಟ್ಟೂರಿಗೆ ಸಾಗಿಸಲು ಅಡ್ಡಿಯಾಗಿದೆ

ರಾಜ್ಯ ಸರ್ಕಾರದಿಂದಲೂ ಪ್ರಕ್ರಿಯೆ ನಡೆಸಲಾಗಿತ್ತು. ಆದರೆ, ಕೋವಿಡ್ ನಿಯಮಾವಳಿ ಪ್ರಕಾರ ಪಾರ್ಥಿವ ಶರೀರವನ್ನು ಬೆಳಗಾವಿಗೆ ತರಲು ಅವಕಾಶ ಆಗುತ್ತಿಲ್ಲ ಎಂದು ತಿಳಿದುಬಂದಿದೆ.

ಪಾರ್ಥಿವ ಶರೀರವನ್ನು ಕೊಂಡೊಯ್ಯವುದಕ್ಕೆ ಏಮ್ಸ್​ ವೈದ್ಯರು ಸಾಧ್ಯವಿಲ್ಲ ಎಂದಿದ್ದಾರೆ. ಅಲ್ಲದೇ ಈ ಕುರಿತು ಪಿಯೂಷ್​ ಗೋಯೆಲ್​ ಕೂಡ ನಿಬಂಧನೆ ಸಡಿಲಿಸಲು ಸಾಧ್ಯವಾಗುತ್ತಿಲ್ಲ ಎಂಬ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆ ಈ ಕುರಿತು ಕುಟುಂಬ ವರ್ಗ ಸಚಿವರೊಂದಿಗೆ ಚರ್ಚೆ ನಡೆಸಿದ್ದಾರೆ. ಆದರೆ, ಇದು ಫಲಪ್ರದವಾಗದ ಹಿನ್ನಲೆ ಅವರ ಅಂತ್ಯಸಂಸ್ಕಾರ ದೆಹಲಿಯಲ್ಲೇ ನಡೆಯಲಿದೆ. ದೆಹಲಿ ಲೋಧಿ ಎಸ್ಟೇಟ್​ನಲ್ಲಿ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದ್ದು, ಸಂಬಂಧಿಕರಿಗೆ ದೆಹಲಿಗೆ ಬರಲು ಸೂಚಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com