ಅಕ್ಟೋಬರ್-ನವೆಂಬರ್ ನಲ್ಲಿ ಗ್ರಾಮ ಪಂಚಾಯತ್ ಚುನಾವಣೆ: ರಾಜ್ಯ ಚುನಾವಣಾ ಆಯೋಗ

ರಾಜ್ಯ ಚುನಾವಣಾ ಆಯೋಗ ಈ ವರ್ಷದ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸುವ ಸಾಧ್ಯತೆಯಿದೆ.

Published: 25th September 2020 10:23 AM  |   Last Updated: 25th September 2020 10:23 AM   |  A+A-


Representational image

ಸಾಂದರ್ಭಿಕ ಚಿತ್ರ

Posted By : Shilpa D
Source : The New Indian Express

ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಈ ವರ್ಷದ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸುವ ಸಾಧ್ಯತೆಯಿದೆ. 

5,800 ಗ್ರಾಮ ಪಂಚಾಯತ್ ಗಳಿಗೆ ಈ ವರ್ಷ ಚುನಾವಣೆ ನಡೆಯಲಿದ್ದು, ಅಗತ್ಯವಿರುವ ಪೂರ್ವ ಸಿದ್ಧತೆ ಕೈಗೊಳ್ಳಲು ಚುನಾವಣಾ ಆಯೋಗ ರಾಜ್ಯ ಪೊಲೀಸ್ ಡಿಜಿ ಮತ್ತು ಐಜಿಪಿ ಅವರಿಗೆ ಪತ್ರ ಬರೆದಿದೆ.

ಚುನಾವಣಾ ಸಮದಲ್ಲಿ ಸೂಕ್ತ ಭದ್ರತೆ ಕೈಗೊಂಡು ಕಾನೂನು ಸುವ್ಯವಸ್ಥೆ ಪಾಲಿಸುವಂತೆ ಸೂಚಿಸಿದೆ. ಚುನಾವಣಾ ಖರ್ಚು ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ.

ಪ್ರಚಾರ ಮತ್ತು ಮತದಾನದ ಕಾರ್ಯವಿಧಾನಗಳ ವಿವರಗಳೊಂದಿಗೆ ಪಂಚಾಯತ್ ಚುನಾವಣೆಗಳನ್ನು ನಡೆಸಲು ರಾಜ್ಯ ಚುನಾವಣಾ ಆಯೋಗವು ಎಸ್‌ಒಪಿಗಳನ್ನು ನೀಡಿತ್ತು.

ಈ ವರ್ಷ ಮೇ ಮತ್ತು ಜೂನ್‌ನಲ್ಲಿ ಗ್ರಾಮ ಪಂಚಾಯಿತಿಗಳ ಅಧಿಕಾರ ಅವಧಿ ಕೊನೆಗೊಂಡರೂ ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ.

Stay up to date on all the latest ರಾಜ್ಯ news
Poll
Congress logo

ನಾಯಕತ್ವದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷ ಒಡಕಿನತ್ತ ಸಾಗುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp