ಕೃಷಿ ಮಸೂದೆಗಳಿಗೆ ವಿರೋಧಿಸಿ ಇಂದು ಭಾರತ್ ಬಂದ್: ರಾಜ್ಯದಲ್ಲಿ ಹೆದ್ದಾರಿ ತಡೆ

ರೈತರಿಗೆ ಮಾರಕವಾಗುವ ಮಸೂದೆಗಳನ್ನು ಕೈಬಿಡುವಂತೆ ಆಗ್ರಹಿಸಿ ಹೋರಾಟ ತೀವ್ರಗೊಳಿಸಿರುವ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳ ಐಕ್ಯ ಹೋರಾಟ ಸಮಿತಿಯು ಶುಕ್ರವಾರ ರಾಜ್ಯದಾದ್ಯಂತ ಹೆದ್ದಾರಿ ಬಂದ್ ಹಾಗೂ ಜೈಲ್ ಭರೋ ಚಳವಳಿ ನಡೆಸಲಿವೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರೈತರಿಗೆ ಮಾರಕವಾಗುವ ಮಸೂದೆಗಳನ್ನು ಕೈಬಿಡುವಂತೆ ಆಗ್ರಹಿಸಿ ಹೋರಾಟ ತೀವ್ರಗೊಳಿಸಿರುವ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳ ಐಕ್ಯ ಹೋರಾಟ ಸಮಿತಿಯು ಶುಕ್ರವಾರ ರಾಜ್ಯದಾದ್ಯಂತ ಹೆದ್ದಾರಿ ಬಂದ್ ಹಾಗೂ ಜೈಲ್ ಭರೋ ಚಳವಳಿ ನಡೆಸಲಿವೆ. 

ಶುಕ್ರವಾರ 32ಕ್ಕೂ ಹೆಚ್ಚು ಸಂಘಟನೆಗಳು ನಡೆಸುವ ಈ ಹೋರಾಟದಲ್ಲಿ ರಾಷ್ಟ್ರಮಟ್ಟದಲ್ಲಿ ರಾಷ್ಟ್ರೀಯ ಕಿಸಾನ್ ಒಕ್ಕೂಟ ಸೇರಿದಂತೆ ಪ್ರಮುಖ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಬೆಂಬಲದ ಅಂಗವಾಗಿ ಹೆದ್ದಾರಿ ಬಂದ್ ಆಯೋಜಿಸಲಾಗಿದೆ. 

ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಎಲ್ಲಾ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಬೀದಿಗಿಳಿಯುವ ರೈತರು ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳನ್ನು ತಡೆ ಹಿಡಿಯಲಿದ್ದಾರೆ. 

ಮೌರ್ಯ ವೃತ್ತ ಮತ್ತು ಫ್ರೀಡಂ ಪಾರ್ಕ್'ನಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ಮೆರವಣಿಗೆ ಸಾಗುವ ರೈತರು ಅಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದು, ಸುತ್ತಮುತ್ತಲ ರಸ್ತೆಗಳ ಸಂಚಾರ ಬಂದ್ ಮಾಡುವ ಸಾಧ್ಯತೆಗಳಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com