ಜಾಹೀರಾತು ಫಲಕ ಅನುಮತಿ ದುರ್ಬಳಕೆ: ಆರೋಗ್ಯ ಇಲಾಖೆ ನಿರ್ದೇಶಕರ ವಿರುದ್ಧ ಹೈಕೋರ್ಟ್ ಗರಂ, ತನಿಖೆಗೆ ಆದೇಶ

ಜಾಹೀರಾತು ಫಲಕ ಕುರಿತು ನ್ಯಾಯಾಲಯ ನೀಡಿದ್ದ ಅನುಮತಿಯನ್ನು ಆರೋಗ್ಯ ಇಲಾಖೆಯ ನಿರ್ದೇಶಕರು ದುರ್ಬಳಕೆ ಮಾಡಿಕೊಂಡಿದ್ದಾರೆಂದು ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಜಾಹೀರಾತು ಫಲಕ ಕುರಿತು ನ್ಯಾಯಾಲಯ ನೀಡಿದ್ದ ಅನುಮತಿಯನ್ನು ಆರೋಗ್ಯ ಇಲಾಖೆಯ ನಿರ್ದೇಶಕರು ದುರ್ಬಳಕೆ ಮಾಡಿಕೊಂಡಿದ್ದಾರೆಂದು ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. 

ಸಾರ್ವಜನಿಕರ ಹಿತ ದೃಷ್ಟಿಯಿಂದ ಫಲಕ ಅಳವಡಿಸಿಕೊಳ್ಳಲು 2020ರ ಜುಲೈ 15ರಂದು ಅನುಮತಿ ನೀಡಲಾಗಿತ್ತು. ಆದರೆ, ಖಾಸಗಿ ಕಂಪನಿಗಳ ಲಾಂಛನಗಳನ್ನು ಬಳಸಿ ಉತ್ಪನ್ನಗಳ ಜಾಹೀರಾತಿಗೆ ಅವಕಾಶ ನೀಡಲಾಗಿದೆ. ಸರ್ಕಾರ ನ್ಯಾಯಾಲಯದ ಆದೇಶವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಎಸ್ಎಸ್ ಓಕಾ ನೇತೃತ್ವದ ವಿಭಾಗೀಯ ಪೀಠ ಅಸಮಾಧಾನ ವ್ಯಕ್ತಪಡಿಸಿತು. 

ಅಲ್ಲದೆ, ಅನುಮತಿಯನ್ನು ಹಿಂಪಡೆದಿರುವ ನ್ಯಾಯಪೀಠ, ಈಗಾಗಲೇ ಅಳವಡಿಸಿರುವ ಫಲಕಗಳನ್ನು ಎರಡು ವಾರದಲ್ಲಿ ತೆರವುಗೊಳಿಸಬೇಕು. ಜಾಹೀರಾತು ಪ್ರದರ್ಶಿಸಿದ ಖಾಸಗಿ ಕಂಪನಿಗಳಿಂದ ತೆರಿಗೆ ವಸೂಲಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲು ಬಿಬಿಎಂಪಿಗೆ ಪೀಠ ನಿರ್ದೇಶನ ನೀಡಿದೆ. 

ಖಾಸಗಿ ಕಂಪನಿಗಳ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ನೀಡಿದ ಆರೋಗ್ಯ ಇಲಾಖೆ ನಿರ್ದೇಶಕರ ವಿರುದ್ಧ ತನಿಖೆಗೆ ಉನ್ನತ ಅಧಿಕಾರಿಯನ್ನು ಸರ್ಕಾರ ನೇಮಿಸಬೇಕು. 6 ವಾರಗಳಲ್ಲಿ ತನಿಖಾ ವರದಿ ಸಲ್ಲಿಸಬೇಕು. ಜಾಹೀರಾತು ಪ್ರದರ್ಶಿಸಿದ ಖಾಸಗಿ ಸಂಸ್ಥೆಗಳಿಂದ ಹಣ ಸ್ವೀಕರಿಸಲಾಗಿದೆಯೇ ಎಂಬುದನ್ನೂ ವಿವರಿಸಬೇಕು’ ಎಂದು ಪೀಠ ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com