ಕಾಂಗ್ರೆಸ್-ಜೆಡಿಎಸ್ ಸಭಾತ್ಯಾಗದ ನಡುವೆ ಎಪಿಎಂಸಿ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

ಕಾಂಗ್ರೆಸ್-ಜೆಡಿಎಸ್ ಸದಸ್ಯರ ವಿರೋಧ, ಸಭಾತ್ಯಾಗದ ನಡುವೆ ವಿವಾದಿತ 2020ನೆ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ(ನಿಯಂತ್ರಣ ಮತ್ತು ಅಭಿವೃದ್ಧಿ)(ತಿದ್ದುಪಡಿ) ವಿಧೇಯಕವನ್ನು ವಿಧಾನಸಭೆಯಲ್ಲಿ ಧ್ವನಿಮತದ ಮೂಲಕ ಅನುಮೋದನೆ ಲಭಿಸಿತು.
ಕರ್ನಾಟಕ ವಿಧಾನಸಭೆ
ಕರ್ನಾಟಕ ವಿಧಾನಸಭೆ

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸದಸ್ಯರ ವಿರೋಧ, ಸಭಾತ್ಯಾಗದ ನಡುವೆ ವಿವಾದಿತ 2020ನೆ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ(ನಿಯಂತ್ರಣ ಮತ್ತು ಅಭಿವೃದ್ಧಿ)(ತಿದ್ದುಪಡಿ) ವಿಧೇಯಕವನ್ನು ವಿಧಾನಸಭೆಯಲ್ಲಿ ಧ್ವನಿಮತದ ಮೂಲಕ ಅನುಮೋದನೆ ಲಭಿಸಿತು.

ಭೋಜನ ವಿರಾಮದ ಬಳಿಕ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮಂಡಿಸಿದ ವಿಧೇಯಕದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಎಪಿಎಂಸಿ, ಕೃಷಿ ವಿಚಾರಗಳು ರಾಜ್ಯದ ಲಿಸ್ಟ್ ಗೆ ಸೇರುತ್ತದೆ.

ರೈತರ ಒತ್ತಾಯದಿಂದ ಮಾಡಿದ ತಿದ್ದುಪಡಿಯಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕಚೇರಿಯಿಂದ ಬಂದ ಪತ್ರದ ಆಧಾರದ ಮೇಲೆ ಈ ತಿದ್ದುಪಡಿ ತರಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com