ರೈತಪರ ಸಂಘಟನೆಗಳಿಂದ ರಾಜ್ಯ ಬಂದ್: ಎಸ್ಎಸ್ಎಲ್‌ಸಿ ಪೂರಕ ಪರೀಕ್ಷೆ ಮುಂದೂಡಿಕೆ
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಯ ಸೆಪ್ಟಂಬರ್ 28 ರಂದು ನಡೆಯಬೇಕಿದ್ದ ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ, ಹಿಂದೂಸ್ತಾನಿ ಸಂಗೀತ ವಿಷಯದ ಪರೀಕ್ಷೆಗಳನ್ನು ಸೆಪ್ಟಂಬರ್ 29ಕ್ಕೆ ಮುಂದೂಡಲಾಗಿದೆ.
Published: 26th September 2020 07:26 PM | Last Updated: 26th September 2020 07:26 PM | A+A A-

ಬೆಂಗಳೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಯ ಸೆಪ್ಟಂಬರ್ 28 ರಂದು ನಡೆಯಬೇಕಿದ್ದ ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ, ಹಿಂದೂಸ್ತಾನಿ ಸಂಗೀತ ವಿಷಯದ ಪರೀಕ್ಷೆಗಳನ್ನು ಸೆಪ್ಟಂಬರ್ 29ಕ್ಕೆ ಮುಂದೂಡಲಾಗಿದೆ.
ರೈತ ಪರ ಸಂಘಟನೆಗಳು 28 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಈ ರೀತಿ ತೀರ್ಮಾನ ಕೈಗೊಳ್ಳಲಾಗಿದೆ.
ಕೆ.ಓ.ಎಸ್. ವಿಜ್ಞಾನ-212ನ್ನು ಮುಂದೂಡಲಾಗಿದ್ದು ಸೆಪ್ಟಂಬರ್ 30 ರಂದು ನಡೆಸಲಾಗುವುದು ಇತರೆ ಪರೀಕ್ಷೆಗಳು ನಿಗದಿಯಂತೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.