ಕೊರೋನಾಘಾತಕ್ಕೆ ರಾಜ್ಯ ತತ್ತರ: ಇಂದು ದಾಖಲೆಯ 9,543 ಮಂದಿಗೆ ಪಾಸಿಟಿವ್!

ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಇಂದು ದಾಖಲೆಯ 9,543 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. 

Published: 27th September 2020 07:33 PM  |   Last Updated: 27th September 2020 07:33 PM   |  A+A-


for representation purpose only

ಸಂಗ್ರಹ ಚಿತ್ರ

Posted By : Vishwanath S
Source : Online Desk

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಇಂದು ದಾಖಲೆಯ 9,543 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 5,75,566ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 79 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8,582ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 4,217 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 2,20,847ಕ್ಕೆ ಏರಿಕೆಯಾಗಿದೆ.

ಇಂದು 6,522 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 4,62,241ಕ್ಕೆ ಏರಿಕೆಯಾಗಿದೆ. 1,04,724 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Stay up to date on all the latest ರಾಜ್ಯ news
Poll
Farmers_Protest1

ಹೊಸ ಕೃಷಿ ಕಾನೂನುಗಳ ಬಗ್ಗೆ ರೈತರನ್ನು ದಾರಿ ತಪ್ಪಿಸಲಾಗುತ್ತಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp