ಕರ್ನಾಟಕ ಬಂದ್: ನಾಳೆ ಎಂದಿನಂತೆ ಸರ್ಕಾರಿ ಬಸ್ ಸಂಚಾರ - ಡಿಸಿಎಂ ಲಕ್ಷ್ಮಣ್ ಸವದಿ

ಕೆಲವು ಸಂಘಟನೆಗಳು ನಾಳೆ(ಸೋಮವಾರ)ಬಂದ್ ಗೆ ಕರೆ ಕೊಟ್ಟಿರುವುದ ರಿಂದ ರಾಜ್ಯದ್ಯಂತ ಸಾರಿಗೆ ಸಂಚಾರ ವ್ಯವಸ್ಥೆ ಸುಗಮವಾಗಿ ಸಾಗುವಂತಾಗಲು ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

Published: 27th September 2020 03:56 PM  |   Last Updated: 27th September 2020 04:00 PM   |  A+A-


Laxman Savadi

ಲಕ್ಷ್ಮಣ್ ಸವದಿ

Posted By : Vishwanath S
Source : UNI

ಬೆಂಗಳೂರು: ಕೆಲವು ಸಂಘಟನೆಗಳು ನಾಳೆ(ಸೋಮವಾರ)ಬಂದ್ ಗೆ ಕರೆ ಕೊಟ್ಟಿರುವುದ ರಿಂದ ರಾಜ್ಯದ್ಯಂತ ಸಾರಿಗೆ ಸಂಚಾರ ವ್ಯವಸ್ಥೆ ಸುಗಮವಾಗಿ ಸಾಗುವಂತಾಗಲು ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ಎಂದಿನಂತೆ ಬಸ್ ಸಂಚಾರ ಮುಂದುವರೆಯಲಿದೆ. ಜನತೆಗೆ ಈ ಬಗ್ಗೆ ಯಾವುದೇ ಆತಂಕ ಬೇಡ ಎಂದು ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಬಂದ್ ಹಿನ್ನೆಲೆಯಲ್ಲಿ ಬಸ್ಸುಗಳಿಗೆ ಮತ್ತು ಇತರ ಸರ್ಕಾರಿ ಆಸ್ತಿಪಾಸ್ತಿಗಳಿಗೆ ಯಾವುದೇ ರೀತಿಯ ಧಕ್ಕೆ ಉಂಟಾಗದಂತೆ ಹೆಚ್ಚಿನ ಸುರಕ್ಷತಾ ವ್ಯವಸ್ಥೆಗಳನ್ನು ಒದಗಿಸಿಕೊಡ ಬೇಕೆಂದು ಈಗಾಗಲೇ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸೂಚನೆ ಕೊಡಲಾಗಿದೆ. 

ಅಷ್ಟೇ ಅಲ್ಲ ಬಸ್ಸುಗಳಿಗೆ, ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿ ಉಂಟು ಮಾಡಲು ಯಾರೇ ಯತ್ನಿಸಿದರೂ ಕೂಡ ಅವರ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲು ನಮ್ಮ ಸರ್ಕಾರ ಹಿಂಜರಿಯುವುದಿಲ್ಲವೆಂದು ಅವರು ಎಚ್ಚರಿಕೆ ನೀಡಿದ್ದಾರೆ.

Stay up to date on all the latest ರಾಜ್ಯ news
Poll
Rohit Sharma

ಮುಂಬರುವ ಆಸ್ಟ್ರೇಲಿಯಾ ಪ್ರವಾಸದಲ್ಲಿ ರೋಹಿತ್ ಶರ್ಮಾ ಅವರ ಅನುಪಸ್ಥಿತಿಯು ಟೀಮ್ ಇಂಡಿಯಾದ ಸಾಧನೆಯ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp