ಶಾಲೆಗಳ ಆರಂಭಕ್ಕೆ ಕುರಿತು ಸಲಹೆ ಕೇಳಿದ ಸಚಿವ ಸುರೇಶ್ ಕುಮಾರ್

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ವಳವಾಗುತ್ತಿರುವ ಸಂದಿಗ್ಧ ಪರಿಸ್ಥಿತಿಯಲ್ಲಿ ಶಾಲೆಗಳ ಆರಂಭ ಕುರಿತು ಸಲಹೆ ನೀಡುವಂತೆ ಪ್ರಾಥಮಿಕ‌ ಮತ್ತು ಪ್ರೌಢ ಶಿಕ್ಷಣ ಸಚಿವ ಮನವಿ ಮಾಡಿದ್ದಾರೆ.
ಸಚಿವ ಸುರೇಶ್ ಕುಮಾರ್
ಸಚಿವ ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ವಳವಾಗುತ್ತಿರುವ ಸಂದಿಗ್ಧ ಪರಿಸ್ಥಿತಿಯಲ್ಲಿ ಶಾಲೆಗಳ ಆರಂಭ ಕುರಿತು ಸಲಹೆ ನೀಡುವಂತೆ ಪ್ರಾಥಮಿಕ‌ ಮತ್ತು ಪ್ರೌಢ ಶಿಕ್ಷಣ ಸಚಿವ ಮನವಿ ಮಾಡಿದ್ದಾರೆ.

ಶಾಲೆಗಳನ್ನು ಯಾವಾಗ ಆರಂಭಿಬೇಕು. ಯಾವ ಶಾಲೆಗಳನ್ನು ಮೊದಲು ಪ್ರಾರಂಭಿಸಬಹುದು.ಸಮುದಾಯ ಮತ್ತು ಜನಪ್ರತಿನಿಧಿಗಳಿಂದ ಯಾವ ರೀತಿ ಸಹಕಾರ ನಿರೀಕ್ಷಿಸಬಹುದು.ಈ ಕುರಿತು ಸಲಹೆ, ಸೂಚನೆ ನೀಡುವಂತೆ ಪತ್ರದಲ್ಲಿ ಅವರು ಮನವಿ ಮಾಡಿದ್ದಾರೆ.

ಸೋಂಕಿನಿಂದಾಗಿ ಕಳೆದ ಮಾರ್ಚ್ ನಲ್ಲಿ ಮುಚ್ಚಿದ ಶಾಲೆಗಳನ್ನು ಇನ್ನೂ ತೆರೆಯಲು ಸಾಧ್ಯವಾಗಿಲ್ಲ. ಜೂನ್ ನಲ್ಲಿ ಆರಂಭವಾಗಬೇಕಿದ್ದ ಪ್ರಸಕ್ತ ಶೈಕ್ಷಣಿಕ ಸಾಲಿನ ಚಟುವಟಿಕೆಗಳು ಪೂರ್ಣಪ್ರಮಾಣದಲ್ಲಿ ಆರಂಭಗೊಂಡಿಲ್ಲ. ಇದು ಹಲವು ಸಾಮಾಜಿಕ ಪಿಡುಗುಗಳಿಗೂ ಕಾರಣವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಶಾಲೆಗಳನ್ನು ಆರಂಭಿಸುವ ಬಗ್ಗೆ ಸಲಹೆ ನೀಡುವಂತೆ ಪತ್ರದಲ್ಲಿ ಕೋರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com