ನಗರದಲ್ಲಿನ್ನೂ ಸೋಂಕು ನಿಯಂತ್ರಣಕ್ಕೆ ಬಂದಿಲ್ಲ, ಮತ್ತಷ್ಟು ಕಠಿಣ ಪರಿಸ್ಥಿತಿ ಎದುರಾಗಲಿದೆ: ಬಿಬಿಎಂಪಿ ಆಯುಕ್ತ ಎಚ್ಚರಿಕೆ

ನಗರದಲ್ಲಿನ್ನೂ ಕೊರೋನಾ ವೈರಸ್ ಸೋಂಕು ನಿಯಂತ್ರಣಕ್ಕೆ ಬಂದಿಲ್ಲ. ಮುಂದಿನ ದಿನಗಳಲ್ಲಿ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದ್ದು, ಮತ್ತಷ್ಟು ಕಠಿಣ ಪರಿಸ್ಥಿತಿ ಎದುರಾಗಲಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾತ್ ಅವರು ಹೇಳಿದ್ದಾರೆ. 
ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್
ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್

ಬೆಂಗಳೂರು: ನಗರದಲ್ಲಿನ್ನೂ ಕೊರೋನಾ ವೈರಸ್ ಸೋಂಕು ನಿಯಂತ್ರಣಕ್ಕೆ ಬಂದಿಲ್ಲ. ಮುಂದಿನ ದಿನಗಳಲ್ಲಿ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದ್ದು, ಮತ್ತಷ್ಟು ಕಠಿಣ ಪರಿಸ್ಥಿತಿ ಎದುರಾಗಲಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾತ್ ಅವರು ಹೇಳಿದ್ದಾರೆ. 

ಶನಿವಾರ 198 ವಾರ್ಡ್'ಗಳ ನೋಡೆಲ್ ಅಧಿಕಾರಿಗಳು ಮತ್ತು ಸ್ಥಳೀಯ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪ್ರತಿನಿಧಿಗಳೊಂದಿಗೆ ನಗರದಲ್ಲಿ ಮಂಜುನಾಥ್ ಪ್ರಸಾದ್ ಅವರು ನಗರದಲ್ಲಿ ಕೊರೋನಾ ಸೋಂಕು ನಿಯಂತ್ರಣ ಕುರಿತು ವಿಡಿಯೋ ಕಾನ್ಫರೆನ್ಸ್ ನಡೆಸಿದರು. 

ಈ ವೇಳೆ ಮಾತನಾಡಿರುವ ಅವರು, ಇಡೀ ಆರ್ಥಿಕ ವ್ಯವಸ್ಥೆ ತೆರೆದುಕೊಂಡಿದೆ. ಇಲ್ಲಿಗೆ ಕೊರೋನಾ ಸೋಂಕಿನ ಭೀತಿ ಮುಗಿಯಿತೆಂದು ಸಾರ್ವಜನಿಕರು ಸೋಂಕಿನ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ನಿರ್ಲಕ್ಷ್ಯವಹಿಸುವ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿದ್ದರೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ ತಲಾ ರೂ.200 ವಿಧಿಸುವ ದಂಡವನ್ನು ರೂ.1 ಸಾವಿರಕ್ಕೆ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರ ಒಪ್ಪಿಗೆ ನೀಡಿದರೆ ದಂಡ ಪ್ರಮಾಣ ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com