ಬೆಂಗಳೂರು: ಹೃದಯ ವೈಫಲ್ಯ ಸಮಸ್ಯೆಯಿಂದ ಬಳಲುತ್ತಿರುವ ಶೇ.75ರಷ್ಟು ಜನರು ಆಸ್ಪತ್ರೆಗೆ ತಡವಾಗಿ ದಾಖಲಾಗುತ್ತಿದ್ದಾರೆ; ಸಮೀಕ್ಷೆ

ಹೃದಯ ವೈಫಲ್ಯ ಸಮಸ್ಯೆ ಎದುರಿಸುತ್ತಿರುವ ನಗರದ ಶೇ.75ರಷ್ಟು ಜನರು ತಡವಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆಂದು ಸಮೀಕ್ಷೆಯೊಂದು ಹೇಳಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಹೃದಯ ವೈಫಲ್ಯ ಸಮಸ್ಯೆ ಎದುರಿಸುತ್ತಿರುವ ನಗರದ ಶೇ.75ರಷ್ಟು ಜನರು ತಡವಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆಂದು ಸಮೀಕ್ಷೆಯೊಂದು ಹೇಳಿದೆ. 

ಬೆಂಗಳೂರಿನಲ್ಲಿ ಇಬ್ಬರು ಹೃದ್ರೋಗ ತಜ್ಞರು ಈ ಅನೌಪಚಾರಿಕ ಸಮೀಕ್ಷೆಯೊಂದನ್ನು ನಡೆಸಿದ್ದು, ಬೆಂಗಳೂರಿನಲ್ಲಿ ಹೃದಯ ವೈಫಲ್ಯ ಸಮಸ್ಯೆಯಿಂದ ಬಳಲುತ್ತಿರುವ ಶೇ.75ರಷ್ಟು ಜನರು ಅರಿವಿನ ಕೊರತೆಯಿಂದಾಗಿ ತಡವಾಗಿ ಹೃದ್ರೋಗ ತಜ್ಞರನ್ನು ಭೇಟಿ ಮಾಡುತ್ತಿದ್ದಾರೆಂದು ವರದಿಯಲ್ಲಿ ತಿಳಿಸಿದ್ದಾರೆ. 

ಸಮೀಕ್ಷೆಯಲ್ಲಿ ಹೃದಯ ಸಮಸ್ಯೆಯಿಂದ ಬಳಲುತ್ತಿರುವ 1,000 ರೋಗಿಗಳನ್ನು ಬಳಸಿಕೊಳ್ಳಲಾಗಿದೆ. ಹೃದಯ ವೈಫಲ್ಯ ಸಮಸ್ಯೆಯಿಂದ ಬಳಲುತ್ತಿರುವವರು ಶೇ.60 ರಷ್ಟು ರೋಗಿಗಳು ಮಧುಮೇಹ ಮತ್ತು ಶೇ.50 ರಷ್ಟು ಜನರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವುದು ಕಂಡು ಬಂದಿದೆ. 

ಹೃದಯ ವೈಫಲ್ಯವು ಮುಂದುವರೆಯುವ ಹಾಗೂ ದೀರ್ಘಕಾಲದ ಸ್ಥಿತಿಯಾಗಿದ್ದು, ಇದರಲ್ಲಿ ಹೃದಯದ ಸ್ನಾಯುಗಳು ಬಿರುಸುಗೊಳ್ಳುವುದು ಅಥವಾ ದುರ್ಬಲವಂತೆ ಮಾಡುತ್ತದೆ. ಅಲ್ಲದೆ, ದೇಹದಲ್ಲಿ ರಕ್ತ ಸರಾಗವಾಗಿ ಚಲಿಸಲು ಇದರಿಂದ ಸಾಧ್ಯವಾಗುವುದಿಲ್ಲ. ಇಂತಹ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳು ಆರಂಭದಲ್ಲಿ ರೋಗಲಕ್ಷಣಗಳನ್ನು ನಿರ್ಲಕ್ಷಿಸುತ್ತಾರೆ. ವೃದ್ಧಾಪ್ಯ, ಆಯಾಸ, ನಿಶಕ್ತಿ, ಕಾಲು ಊದಿಕೊಳ್ಳುವುದು ಮತ್ತು ದಿನನಿತ್ಯದ ಚಟುವಟಿಕೆಗಳಲ್ಲಿ ತೊಡಗಿಕೊಂಡಾಗ ಉಸಿರಾಟ ಸಮಸ್ಯೆಗಳು ಎದುರಾಗುತ್ತವೆ. 

ಉಸಿರಾಟ ಸಮಸ್ಯೆ ಸೇರಿದಂತೆ ಇತರೆ ರೋಗಲಕ್ಷಣಗಳು ತೀವ್ರವಾದಾಗ ಮಾತ್ರ ರೋಗಿಗಳು ಆಸ್ಪತ್ರೆಗೆ ಹೋಗಲುವ ಮನಸ್ಸು ಮಾಡುತ್ತಾರೆ. ಇದರಿಂದ ಬಹು ಅಂಗಾಂಗ ವೈಫಲ್ಯ ಮತ್ತು ಸಾವು ಎದುರಾಗುತ್ತದೆ ಎಂದು ಸಮೀಕ್ಷೆ ನಡೆಸಿದ ವೈದ್ಯರಲ್ಲಿ ಒಬ್ಬರಾಗಿರುವ ಡಾ.ರಾಹುಲ್ ಪಾಟೀಲ್ ಅವರು ಹೇಳಿದ್ದಾರೆ. 

ಪರಿಧಮನಿಯ ಹೃದಯ ಕಾಯಿಲೆಯು ಅಪಧಮನಿಗಳಲ್ಲಿ ಒಂದು ಗುಳಿಯನ್ನುಂಟು ಮಾಡುತ್ತದೆ. ಇದೇ ಹೃದಯಾಘಾತಕ್ಕೆ ಕಾರಣವಾಗುತ್ತದೆ ಮತ್ತು ಇದರಿಂದಾಗಿ ಸ್ನಾಯುಗಳೂ ಕೂಡ ಹಾನಿಯುಂಟಾಗುತ್ತವೆ ಎಂದು ಪಾಟೀಲ್ ತಿಳಿಸಿದ್ದಾರೆ. 

50 ವರ್ಷಕ್ಕಿಂತ ಮೇಲ್ಪಟ್ಟವರು, ಬೊಜ್ಜು, ಧೂಮಪಾನಿಗಳು, ಮದ್ಯವ್ಯಸನಿಗಳು ಮತ್ತು ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರು ಹೆಚ್ಚು ಜಾಗೃತರಾಗಿರಬೇಕು ಎಂದು ತಜ್ಞರು ಕೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com