ಕೆಎಸ್ ಆರ್ ನಿಲ್ದಾಣದಲ್ಲಿ ಕ್ಯುಆರ್ ಕೋಡ್ ಮೂಲಕ ಪ್ಲಾಟ್ ಫಾರ್ಮ್ ಟಿಕೆಟ್ ಪಡೆಯುವ ವ್ಯವಸ್ಥೆ ಜಾರಿ

ಕೆಎಸ್ಆರ್ ರೈಲ್ವೆ ಸ್ಟೇಷನ್ ನಲ್ಲಿ ಇನ್ನು ಮುಂದೆ ಪ್ಲಾಟ್ ಫಾರ್ಮ್ ಟಿಕೆಟ್ ಪಡೆಯುವುದಕ್ಕೆ ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇರುವುದಿಲ್ಲ. ಏಕೆಂದರೆ ಕ್ಯುಆರ್ ಕೋಡ್ ಮೂಲಕ ಟಿಕೆಟ್ ಪಡೆಯುವ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ. 
ಕೆಎಸ್ ಆರ್ ನಿಲ್ದಾಣದಲ್ಲಿ ಕ್ಯುಆರ್ ಕೋಡ್ ಮೂಲಕ ಪ್ಲಾಟ್ ಫಾರ್ಮ್ ಟಿಕೆಟ್
ಕೆಎಸ್ ಆರ್ ನಿಲ್ದಾಣದಲ್ಲಿ ಕ್ಯುಆರ್ ಕೋಡ್ ಮೂಲಕ ಪ್ಲಾಟ್ ಫಾರ್ಮ್ ಟಿಕೆಟ್

ಬೆಂಗಳೂರು: ಕೆಎಸ್ಆರ್ ರೈಲ್ವೆ ಸ್ಟೇಷನ್ ನಲ್ಲಿ ಇನ್ನು ಮುಂದೆ ಪ್ಲಾಟ್ ಫಾರ್ಮ್ ಟಿಕೆಟ್ ಪಡೆಯುವುದಕ್ಕೆ ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇರುವುದಿಲ್ಲ. ಏಕೆಂದರೆ ಕ್ಯುಆರ್ ಕೋಡ್ ಮೂಲಕ ಟಿಕೆಟ್ ಪಡೆಯುವ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ. 

ಕಿಯೋಸ್ಕ್ (ಯಂತ್ರಗಳ ಮೂಲಕ ಟಿಕೆಟ್ ಪಡೆಯುವ ವ್ಯವಸ್ಥೆ) ಗಳನ್ನು ಭಾರತೀಯ ರೈಲ್ವೆ ನಿಲ್ದಾಣಗಳ ಅಭಿವೃದ್ಧಿ (ಐಆರ್ ಎಸ್ ಡಿಸಿ)  ಒಂದು ಮತ್ತು 8 ನೇ ಪ್ಲಾಟ್ ಫಾರ್ಮ್ ಗಳಲ್ಲಿ ಅಳವಡಿಸಿದ್ದು, ಗ್ರಾಹಕರು ನೇರವಾಗಿ ಪ್ಲಾಟ್ ಫಾರ್ಮ್ ಟಿಕೆಟ್ ನ್ನು ಮಾನವ ಸಂಪರ್ಕವಿಲ್ಲದೇ ಕ್ಯುಆರ್ ಕೋಡ್ ಮೂಲಕ ಪಡೆದುಕೊಳ್ಳಬಹುದಾಗಿದೆ. 

ರೈಲ್ವೆ ಇಲಾಖೆಯ ಆಧುನೀಕರಣದ ಭಾಗವಾಗಿ ಈ ಯಂತ್ರವನ್ನು ಅಳವಡಿಕೆ ಮಾಡಲಾಗಿದ್ದು ಕೋವಿಡ್-19 ಪರಿಸ್ಥಿತಿಯಲ್ಲಿ ಅಂತರ ಕಾಯ್ದುಕೊಳ್ಳುವುದಕ್ಕೂ ಈ ವಿಧಾನ ಸಹಕಾರಿಯಾಗಲಿದೆ. 

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿರುವ ಐಆರ್ ಎಸ್ ಡಿಸಿ ಅಧಿಕಾರಿ ಭಾನುವಾರದಿಂದ ಟಿಕೆಟ್ ಬುಕಿಂಗ್ ಜವಾಬ್ದಾರಿಯನ್ನು ನಮಗೆ ವಹಿಸಲಾಗಿದೆ. 

ಕ್ಯುಆರ್ ಕೋಡ್ ಮೂಲಕ ಟಿಕೆಟ್ ಪಡೆಯುವ ಯಂತ್ರಗಳನ್ನು ಎರಡು ಪ್ರವೇಶ ದ್ವಾರಗಳಲ್ಲಿ ಸ್ಥಾಪಿಸಲಾಗಿದೆ, ಜನರು ತಮ್ಮ ವಾಹನಗಳನ್ನು ನಿಲ್ಲಿಸಿ ತಕ್ಷಣವೇ ಟಿಕೆಟ್ ಪಡೆಯುವುದಕ್ಕೆ ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ. 

ಎರಡೂ ಕೌಂಟರ್ ಗಳಿಂದ ಭಾನುವಾರ 532 ಟಿಕೆಟ್ ಗಳನ್ನು ಮಾರಾಟ ಮಾಡಲಾಗಿದೆ. ಕೋವಿಡ್-19 ಕಾರಣದಿಂದಾಗಿ ಜನದಟ್ಟಣೆಯನ್ನು ಕಡಿಮೆ ಮಾಡಲು ಕಂಟೋನ್ಮೆಂಟ್, ಸಿಟಿ, ಯಶವಂತಪುರ ನಿಲ್ದಾಣಗಳಲ್ಲಿ ಪ್ಲಾಟ್ ಫಾರ್ಮ್ ಟಿಕೆಟ್ ನ್ನು 50 ರೂಪಾಯಿಗಳಿಗೆ ನಿಗದಿಪಡಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com