ಬೆಂಗಳೂರು: ನಮ್ಮ ಮೆಟ್ರೋದ 28 ಸಿಬ್ಬಂದಿಗೆ ಕೊರೋನಾ ಪಾಸಿಟಿವ್
ಮೆಟ್ರೋ ರೈಲುಗಳಲ್ಲಿ ಪ್ರಯಾಣಿಕರ ಸಂಖ್ಯೆಯನ್ನು ಹೆಚ್ಚಿಸುವುದು ದೊಡ್ಡ ಸವಾಲಿನ ಸಂಗತಿಯಾಗಿದ್ದು, ಈಗ ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಮತ್ತೊಂದು ಹೊಸ ಸಮಸ್ಯೆ ಎದುರಾಗಿದೆ.
Published: 30th September 2020 02:56 PM | Last Updated: 30th September 2020 02:56 PM | A+A A-

ನಮ್ಮ ಮೆಟ್ರೋ ರೈಲು(ಸಾಂದರ್ಭಿಕ ಚಿತ್ರ)
ಬೆಂಗಳೂರು: ಮೆಟ್ರೋ ರೈಲುಗಳಲ್ಲಿ ಪ್ರಯಾಣಿಕರ ಸಂಖ್ಯೆಯನ್ನು ಹೆಚ್ಚಿಸುವುದು ದೊಡ್ಡ ಸವಾಲಿನ ಸಂಗತಿಯಾಗಿದ್ದು, ಈಗ ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಮತ್ತೊಂದು ಹೊಸ ಸಮಸ್ಯೆ ಎದುರಾಗಿದೆ.
ಕೋವಿಡ್-19 ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದರೂ ತನ್ನದೇ ಸಿಬ್ಬಂದಿಗಳನ್ನು ಮಹಾಮಾರಿಯಿಂದ ಕಾಪಾಡಿಕೊಳ್ಳಲು ಸಾಧ್ಯವಾಗಿಲ್ಲ. ಸೆಪ್ಟೆಂಬರ್ 7 ರಂದು ಮೆಟ್ರೋ ಪುನರಾರಂಭವಾದ ನಂತರ ಲೊಕೊ ಪೈಲಟ್‌ಗಳು ಮತ್ತು ಸ್ಟೇಷನ್ ಕಂಟ್ರೋಲರ್‌ಗಳು ಸೇರಿದಂತೆ ಒಟ್ಟು 28 ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಎಲ್ಲಾ 28 ಸಿಬ್ಬಂದಿಗೆ ಯಾವುದೇ ಕೊರೋನಾ ಲಕ್ಷಣಗಳು ಕಾಣಿಸಿಕೊಂಡಿಲ್ಲ ಮತ್ತು ಎಲ್ಲರೂ ಆರೋಗ್ಯವಾಗಿದ್ದಾರೆ ಎಂದು ಮೆಟ್ರೋ ಮೂಲಗಳು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿವೆ.
“ಎಲ್ಲಾ ಕೊರೋನಾ ಸೋಂಕಿತ ಸಿಬ್ಬಂದಿ ಆರೋಗ್ಯವಾಗಿದ್ದಾರೆ ಮತ್ತು ಅವರಿಗೆ ಯಾವುದೇ ರೋಗಲಕ್ಷಣಗಳಿಲ್ಲ ಎಂದು ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್, ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.