ಬೆಂಗಳೂರು ಉಗ್ರರ ತಾಣ ಎಂಬ ಹೇಳಿಕೆಗೆ ಬದ್ಧ: ಸಂಸದ ತೇಜಸ್ವಿ ಸೂರ್ಯ

'ಬೆಂಗಳೂರು ಉಗ್ರರ ತಾಣ' ಎಂಬ ಹೇಳಿಕೆಗೆ ಈಗಲೂ ಬದ್ಧನಿದ್ದೇನೆ ಎಂದು ಬಿಜೆಪಿ ಯುವಮೋರ್ಚಾ ನೂತನ ರಾಷ್ಟೀಯ ಅಧ್ಯಕ್ಷ ಮತ್ತು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ

ಬೆಂಗಳೂರು: 'ಬೆಂಗಳೂರು ಉಗ್ರರ ತಾಣ' ಎಂಬ ಹೇಳಿಕೆಗೆ ಈಗಲೂ ಬದ್ಧನಿದ್ದೇನೆ ಎಂದು ಬಿಜೆಪಿ ಯುವಮೋರ್ಚಾ ನೂತನ ರಾಷ್ಟೀಯ ಅಧ್ಯಕ್ಷ ಮತ್ತು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

ಯುವಮೋರ್ಚಾ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿಯುಕ್ತರಾದ ಬಳಿಕ ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಗೆ ಮೊದಲ ಬಾರಿಗೆ ಭೇಟಿ ನೀಡಿದ್ದ ಅವರು, ಭಾರತ ಮಾತೆ ಮತ್ತು ಭಾವುರಾವ್ ದೇಶಪಾಂಡೆ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. 

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯನ್ನು ಪ್ರಸ್ತಾಪಿಸಿದ ಅವರು, ಬೆಂಗಳೂರಿನ ಪೊಲೀಸ್ ಠಾಣೆಯೊಂದನ್ನು ಧ್ವಂಸ ಮಾಡಲು ಮುಂದಾದಾಗ ನನ್ನ ರಕ್ತ ಕುದಿಯುತ್ತದೆ. ಪಿಎಫ್‌ಐ ಗೂಂಡಾಗಿರಿಗೆ ಕಾಂಗ್ರೆಸ್ ಕುಮ್ಮಕ್ಕು ನೀಡುತ್ತಿದ್ದು, ಅದೇ ಕಾರಣಕ್ಕೆ ಅವರನ್ನು ಬೆಂಬಲಿಸುತ್ತಿದ್ದ ಕಾಂಗ್ರೆಸ್‌ನವರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು. 

ಬೆಂಗಳೂರಿನ ಸುರಕ್ಷತೆಗೆ ಎನ್‌ಐಎ ಬೇಕು. ಆದರೆ, ಎನ್‌ಐಎ ಬರುವುದರಿಂದದ ಎಸ್‌ಡಿಪಿಐ ಕಾಂಗ್ರೆಸ್ ನಡುವಿನ ಮ್ಯಾಚ್ ಫಿಕ್ಸಿಂಗ್ ಹಾಳಾಗುತ್ತದೆ. ಅದನ್ನು ತಪ್ಪಿಸಲು ಮನಸ್ಸಿಲ್ಲದ ಕಾರಣ ಕಾಂಗ್ರೆಸ್ ಮುಖಂಡರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com