ಬಿಎಸ್ ವೈ ಶಿಫಾರಸು ಮೇರೆಗೆ ಗಂಗೂಬಾಯಿ ಹಾನಗಲ್ ವಿವಿ ಕುಲಪತಿ ಆಯ್ಕೆ, ಸಮಿತಿಯಿಂದ ಆಯ್ಕೆಯಾಗಿಲ್ಲ: ಹೈಕೋರ್ಟ್

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಶಿಫಾರಸು ಮೇರೆಗೆ ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯದ  ಕುಲಪತಿ ಹುದ್ದೆಗೆ ನಾಗೇಶ್ ವಿ ಬೆಟ್ಟಕೋಟೆ ಅವರನ್ನು ನೇಮಕ ಮಾಡಿರುವುದು ಕೋರ್ಟ್ ಗೆ ಸಲ್ಲಿಸಿರುವ ದಾಖಲೆಗಳಿಂದ ತಿಳಿದುಬಂದಿದೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
Updated on

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಶಿಫಾರಸು ಮೇರೆಗೆ ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯದ  ಕುಲಪತಿ ಹುದ್ದೆಗೆ ನಾಗೇಶ್ ವಿ ಬೆಟ್ಟಕೋಟೆ ಅವರನ್ನು ನೇಮಕ ಮಾಡಿರುವುದು ಕೋರ್ಟ್ ಗೆ ಸಲ್ಲಿಸಿರುವ ದಾಖಲೆಗಳಿಂದ ತಿಳಿದುಬಂದಿದೆ.

ಎರಡನೇ ಶೋಧನಾ ಸಮಿತಿ ಶಿಫಾರಸು ಮಾಡಿದ್ದ ಮೂವರ ಹೆಸರಿನಲ್ಲಿ ನಾಗೇಶ್ ಬೆಟ್ಟಕೋಟೆ ಅವರ ಹೆಸರು ಇಲ್ಲದಿರುವುದನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಾಧೀಶರಾದ ಸುರಾಜ್ ಗೋವಿಂದರಾಜ್ ಅವರನ್ನೊಳಗೊಂಡ ವಿಭಾಗೀಯ ಪೀಠ ಗುರುತಿಸಿದೆ.

ಮೊದಲನೇ ಶೋಧನಾ ಸಮಿತಿ ಮಾಡಿದ್ದ ಶಿಫಾರಸ್ಸಿನಲ್ಲಿ ನಾಗೇಶ್ ಬೆಟ್ಟಕೋಟೆ ಅವರ ಹೆಸರು ಇರುವುದು ನ್ಯಾಯಲಯಕ್ಕೆ ಸಲ್ಲಿಸಿರುವ ದಾಖಲೆಗಳಿಂದ ತಿಳಿದುಬಂದಿದೆ. ಬೆಟ್ಟಕೋಟೆ ನೇಮಕವನ್ನು ಪ್ರಶ್ನಿಸಿ ಮೈಸೂರಿನ ಶ್ರೀ ಪ್ರಸನ್ನ ವಿದ್ಯಾ ಗಣಪತಿ ಮಹೋತ್ಸವ ಚಾರಿಟೇಬಲ್ ಟ್ರಸ್ಟ್ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನಂತರ ನ್ಯಾಯಾಲಯ ಹೊರಡಿಸಿದ ನಿರ್ದೇಶನಗಳಿಗೆ ಪ್ರತಿಕ್ರಿಯೆಯಾಗಿ ಈ ದಾಖಲೆಗಳನ್ನು ಸಲ್ಲಿಸಲಾಗಿದೆ.

ಸೆಪ್ಟೆಂಬರ್ 2020 ರಲ್ಲಿ ಹೈಕೋರ್ಟ್ ಹೊರಡಿಸಿದ ನಿರ್ದೇಶನಗಳನ್ನು ಅನುಸರಿಸಿ ಆಕಾಂಕ್ಷಿಗಳೊಬ್ಬರು ಸಲ್ಲಿಸಿದ್ದ ಅರ್ಜಿಯ ಆಧಾರದ ಮೇಲೆ ಎರಡನೇ ಶೋಧನಾ ಸಮಿತಿಯನ್ನು ರಚಿಸಲಾಯಿತು. ಆದಾಗ್ಯೂ, ಎರಡನೇ ಶೋಧನಾ ಸಮಿತಿಯು ಬೆಟ್ಟಕೋಟೆ ಹೆಸರನ್ನು ಶಿಫಾರಸು ಮಾಡಿರಲಿಲ್ಲ.

ರಾಜ್ಯ ಡಾ.ಗಂಗುಬಾಯಿ ಹಂಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಕಾಯ್ದೆ 2009 ರ ಸೆಕ್ಷನ್ 12 ರ ಪ್ರಕಾರ ಶೋಧನಾ ಸಮಿತಿ ಶಿಫಾರಸು ಮಾಡಿದ ಮೂರು ಹೆಸರುಗಳಿಂದ ಉಪಕುಲಪತಿಯ ನೇಮಕವನ್ನು ಮಾಡಬಹುದು ಎಂದು ಗಮನಿಸಿದ ನ್ಯಾಯಪೀಠ, ಕುಲಪತಿ ನೇಮಕ ಪ್ರಕ್ರಿಯೆಗೆ ಸಂಬಂಧಿಸಿದಂತೆ ದಾಖಲೆ ಸಲ್ಲಿಸುವಂತೆ ನಿರ್ದೇಶಿಸಿತ್ತು ಅಲ್ಲದೇ, ಅರ್ಜಿಗೆ ಆಕ್ಷೇಪಣೆಗಳ ಹೇಳಿಕೆಯನ್ನು ಸಲ್ಲಿಸಲು ಬೆಟ್ಟಕೋಟೆ ಪರ ವಕೀಲರಿಗೆ ತಿಳಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com