ಮಸ್ಕಿ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡಗೆ ಕೋವಿಡ್-19 ಪಾಸಿಟಿವ್

ಮಸ್ಕಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪ್ರತಾಪ್ ಗೌಡ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸ್ವತಃ ಪ್ರತಾಪಗೌಡ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ.
ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ
ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ
Updated on

ರಾಯಚೂರು: ಮಸ್ಕಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪ್ರತಾಪ್ ಗೌಡ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸ್ವತಃ ಪ್ರತಾಪಗೌಡ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ.

ಪ್ರತಾಪಗೌಡ ಅವರು ಕೆಲವು ದಿನಗಳ ಹಿಂದಷ್ಟೇ ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದರೂ ಇದೀಗ ಮತ್ತೆ ಸೋಂಕು ತಗುಲಿದೆ.

'ನನಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಪ್ರತ್ಯೇಕವಾಗಿ ಇದ್ದೇನೆ. ಯಾರೂ ಆತಂಕ ಪಡಬೇಕಾಗಿಲ್ಲ. ಶೀಘ್ರವೇ ಗುಣಮುಖನಾಗಿ ಬರುತ್ತೇನೆ. ಏ.17 ರಂದು‌‌ ಮತದಾನ ಇದ್ದು, ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ತಮ್ಮನ್ನು ಭೇಟಿ ಮಾಡುತ್ತಾರೆ. ಅವರನ್ನು ನಾನೇ ಎಂದು ಪರಿಭಾವಿಸಿ ಆಶೀರ್ವದಿಸಲು ಮತ್ತು ಕಮಲದ ಗುರುತಿಗೆ ಮತ ನೀಡಲು ಪ್ರತಾಪಗೌಡ ಅವರು ಸಾಮಾಜಿಕ ಜಾಲತಾಣದಲ್ಲಿ ಕೋರಿದ್ದಾರೆ.

 ಅಲ್ಲದೆ ಜನಸಾಮಾನ್ಯರು ಹಾಗೂ ಅವರ ಕುಟುಂಬದವರ ಆರೋಗ್ಯದ ಬಗ್ಗೆ ಎಚ್ಚರಿಕೆ ತೆಗೆದುಕೊಳ್ಳಲು ವಿನಂತಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com