ವಿದ್ಯಾರ್ಥಿಗಳಿಗೆ ಈ ವರ್ಷ ಬೇಸಿಗೆ ರಜೆ ಇಲ್ಲ: ಅಶ್ವತ್ಥ್ ನಾರಾಯಣ್

ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದರೂ ಉನ್ನತ ಶಿಕ್ಷಣದ ಚಟುವಟಿಕ ಹಾಗೂ ಪರೀಕ್ಷೆಗಳೂ ನಿಗದಿತ ವೇಳಾಪಟ್ಟಿಯಂತೆಯೇ ಮುಂದುವರೆಯಲಿವೆ. ಪರೀಕ್ಷೆ ಮುಗಿಯುತ್ತಿದ್ದಂತೆಯೇ ರಜೆ ನೀಡದೆ ಮುಂದಿನ ವರ್ಷದ ಶೈಕ್ಷಣಿಕ ಚಟುವಟಿಕೆ ಆರಂಭಿಸುತ್ತೇವೆಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ. 
ಅಶ್ವತ್ಥ್ ನಾರಾಯಣ್
ಅಶ್ವತ್ಥ್ ನಾರಾಯಣ್
Updated on

ಬೆಂಗಳೂರು: ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದರೂ ಉನ್ನತ ಶಿಕ್ಷಣದ ಚಟುವಟಿಕ ಹಾಗೂ ಪರೀಕ್ಷೆಗಳೂ ನಿಗದಿತ ವೇಳಾಪಟ್ಟಿಯಂತೆಯೇ ಮುಂದುವರೆಯಲಿವೆ. ಪರೀಕ್ಷೆ ಮುಗಿಯುತ್ತಿದ್ದಂತೆಯೇ ರಜೆ ನೀಡದೆ ಮುಂದಿನ ವರ್ಷದ ಶೈಕ್ಷಣಿಕ ಚಟುವಟಿಕೆ ಆರಂಭಿಸುತ್ತೇವೆಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವವಿದ್ಯಾಲಯ ಮಟ್ಟದಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಎಂಜಿನಿಯರಿಂಗ್, ಡಿಪ್ಲೋಮಾ ಸೇರಿದಂತೆ ಉನ್ನತ ಶಿಕ್ಷಣ ವ್ಯಾಪ್ತಿಗೆ ಬರುವ ಎಲ್ಲಾ ವಿಭಾಗದ ಪರೀಕ್ಷೆಗಳು ನಿಗದಿತ ವೇಳಾ ಪಟ್ಟಿಯಂತೆ ನಡೆಯಲಿವೆ ಎಂದು ಹೇಳಿದ್ದಾರೆ. 

ಈಗಾಗಲೇ ಶೈಕ್ಷಣಿಕ ವರ್ಷದ ನಾಲ್ಕೈದು ತಿಂಗಳು ತಡವಾಗಿದೆ. ಮತ್ತೆ ತಡವಾದರೆ ಓದು, ಪರೀಕ್ಷೆ, ಫಲಿತಾಂಶ, ಉದ್ಯೋಗ, ಮುಂದಿನ ವ್ಯಾಸಂಗಕ್ಕೆ ಸಮಸ್ಯೆಯಾಗುತ್ತದೆ. ಆದ್ದರಿಂದ ಈ ಸಾಲಿನ ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ ಬೇಸಿಗೆ ರಜೆ ನೀಡದೆ, ಕೂಡಲೇ ತರಗತಿಗಳನ್ನು ಆರಂಭಿಸಲಾಗುತ್ತದೆ ಎಂದು ತಿಳಿಸಿದ್ದಾರೆ. 

ಆಫ್'ಲೈನ್ ಮತ್ತು ಆನ್'ಲೈನ್ ಎರಡೂ ಮಾದರಿ ತರಗತಿಗಳು ಆರಂಭಗೊಳ್ಳಲಿವೆ. ಮೊದಲು ಆನ್'ಲೈನ್ ತರಗತಿಗಳು ಆರಂಭವಾಗುತ್ತದೆ. ವಿದ್ಯಾರ್ಥಿಗಳು ಎರಡರ ಪೈಕಿ ಒಂದಕ್ಕೆ ಕಡ್ಡಾಯವಾಗಿ ಹಾಜರಾಬೇಕಾಗುತ್ತದೆ ಎಂದಿದ್ದಾರೆ. 

ವಿದ್ಯಾರ್ಥಿಗಳ ಸುರಕ್ಷತೆಗಾಗಿ ಕೊರೋನಾ ಮಾರ್ಗಸೂಚಿ ಪ್ರಕಾರ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ತರಗತಿ ಕೊಠಡಿಗಳ ಸ್ಯಾನಿಟೈಸೇಷನ್, ಸ್ವಚ್ಛತೆ, ಕೊರೋನಾ ಪರೀಕ್ಷೆ, ದೈಹಿಕ ಅಂತರ ಹಾಗೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com