ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು 11,265 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 10,94,912ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 38 ಜನ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 13,046ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 8,155 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 5,02,024ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 23 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇಂದು 4,364 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,96,367ಕ್ಕೆ ಏರಿಕೆಯಾಗಿದೆ. ಇನ್ನು 85,480 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 506 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement