ಮದುವೆಗೆ ಪೋಷಕರ ವಿರೋಧ: ವಿಷ ಸೇವಿಸಿ ಪ್ರೇಮಿಗಳ ಆತ್ಮಹತ್ಯೆ

ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ನೊಂದ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಚೆನ್ನೈ: ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ನೊಂದ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.

ಬೆಂಗಳೂರು ಮೂಲದ ಅಭಿನೇಷ್ (28) ಮತ್ತು ಪಲ್ಲವಿ (22) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳಾಗಿದ್ದಾರೆ. ಮಧ್ಯರಾತ್ರಿ 12.30ರ ಸುಮಾರಿಗೆ ಅರಸನ್ ಕಾಲೋನಿ ಮುಖ್ಯ ರಸ್ತೆಯಲ್ಲಿ ಎರಡು ಮೃತದೇಹಗಳಿರುವ ಮಾಹಿತಿ ಬಂದಿತ್ತು. ಕೂಡಲೇ ಸ್ಥಳಕ್ಕೆ ತೆರಳಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರೇಮಿಗಳಿಬ್ಬರು ಎರಡು ವಾರಗಳ ಹಿಂದೆ ಬೆಂಗಳೂರು ತೊರೆದು ಚೆನ್ನೈನಲ್ಲಿರುವ ಅಭಿನೇಷ್ ಸಹೋದರಿ ಮನೆಯಲ್ಲಿ ತಂಗಿದ್ದರು. ಈ ನಡುವೆ ವಿಚಾರ ತಾರಕಕ್ಕೇರಿತ್ತು. ಯುವತಿಯ ಪೋಷಕರು ಬೆಂಗಳೂರಿಗೆ ಹಿಂತಿರುವಂತೆ ಒತ್ತಡ ಹೇರಿದ್ದರು. ಇದರಿಂದ ನೊಂದ ಪ್ರೇಮಿಗಳು ಮನೆ ತೊರೆದು ಹೊರಗೆ ಬಂದು ಮಧ್ಯರಾತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com