ಮಂಗಳೂರು ದೋಣಿ ದುರಂತ: 3 ಮೀನುಗಾರರ ಮೃತದೇಹ ಪತ್ತೆ, ನಾಪತ್ತೆಯಾದವರಿಗೆ ಮುಂದುವರಿದ ಶೋಧ

ಹಡಗು ಮತ್ತು ಮೀನುಗಾರಿಕೆ ದೋಣಿ ನಡುವೆ ಸಮುದ್ರದ ಮಧ್ಯದಲ್ಲಿ ಡಿಕ್ಕಿಯಾದ ಪರಿಣಾಮ ಸಾವನ್ನಪ್ಪಿದ ಮೂವರು ಮೀನುಗಾರರ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಮಂಗಳೂರು: ಹಡಗು ಮತ್ತು ಮೀನುಗಾರಿಕೆ ದೋಣಿ ನಡುವೆ ಸಮುದ್ರದ ಮಧ್ಯದಲ್ಲಿ ಡಿಕ್ಕಿಯಾದ ಪರಿಣಾಮ ಸಾವನ್ನಪ್ಪಿದ ಮೂವರು ಮೀನುಗಾರರ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.

ಮೃತಪಟ್ಟವರಲ್ಲಿ ಇಬ್ಬರು ತಮಿಳುನಾಡಿನ ಕೊಲಾಚೆಲ್ ಮೂಲದವರಾಗಿದ್ದರೆ, ಇನ್ನೊಬ್ಬರು ಪಶ್ಚಿಮ ಬಂಗಾಳದವರು. ಶವಗಳನ್ನು ಇಲ್ಲಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಭಾರತೀಯ ಕೋಸ್ಟ್ ಗಾರ್ಡ್ ರಕ್ಷಿಸಿದ ಇಬ್ಬರು ಮೀನುಗಾರರನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ದೋಣಿಯಲ್ಲಿದ್ದ ತಮಿಳುನಾಡಿನ ಆರು ಮಂದಿ ಮತ್ತು ಬಂಗಾಳದ ಮೂವರು ಮೀನುಗಾರರು ಇನ್ನೂ ಪತ್ತೆಯಾಗಿಲ್ಲ.

ಏಪ್ರಿಲ್ 11 ರಂದು ಕೇರಳದ ಕೋಳಿಕ್ಕೋಡ್ ಜಿಲ್ಲೆಯ ಬೇಪೋರ್‌ನಿಂದ ರಾತ್ರಿ 11 ಗಂಟೆಗೆ ಹೊರಟ ಮೀನುಗಾರಿಕಾ ದೋಣಿ IFB Rabah ದಲ್ಲಿ 14 ಮೀನುಗಾರರು ಇದ್ದರು. ಮಂಗಳೂರು ಕರಾವಳಿಯಿಂದ 43 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಮಂಗಳವಾರ ಸುಮಾರು ನಸುಕಿನ ಜಾವ 2.30 ಗಂಟೆಗೆ ಸಿಂಗಾಪುರ ಮೂಲದ MV APL Le Havre ಎನ್ನುವ ಹಡಗಿಗೆ ದೋಣಿ ಡಿಕ್ಕಿ ಹೊಡೆದಿದೆ.

ಕೋಸ್ಟ್ ಗಾರ್ಡ್ ಹಡಗುಗಳಾದ ರಾಜ್‌ದೂತ್, ಅಮರ್ತ್ಯ, C-448 ಮತ್ತು ಡಾರ್ನಿಯರ್ ವಿಮಾನಗಳು ಕಾಣೆಯಾದ ಮೀನುಗಾರರ ಹುಡುಕಾಟವನ್ನು ಮುಂದುವರಿಸಿವೆ. ಇದೇ ವೇಳೆ ನೌಕಾಪಡೆಯ ಸಹಾಯವನ್ನೂ ಕೋರಲಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com