ರೆಮ್'ಡೆಸಿವಿರ್ ಔಷಧ ಕಳ್ಳ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ: ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ

ಕೋವಿಡ್'ಗೆ ಪರಿಣಾಮಕಾರಿ ಔಷಧಿಯಾದ ರೆಮ್'ಡೆಸಿವಿರ್'ನ್ನು ದುರ್ಬಳಕೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ. 
ಗೃಹ ಸಚಿವ ಬಸವರಾಜ ಬೊಮ್ಮಾಯಿ
ಗೃಹ ಸಚಿವ ಬಸವರಾಜ ಬೊಮ್ಮಾಯಿ
Updated on

ಬೆಂಗಳೂರು: ಕೋವಿಡ್'ಗೆ ಪರಿಣಾಮಕಾರಿ ಔಷಧಿಯಾದ ರೆಮ್'ಡೆಸಿವಿರ್'ನ್ನು ದುರ್ಬಳಕೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ. 

ತಮ್ಮ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಶುಕ್ರವಾರ ವಿಧಾನಸೌಧದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಅವರು, ಕೋವಿಡ್'ಗೆ ರೆಮ್'ಡೆಸಿವಿರ್ ಪರಿಣಾಮಕಾರಿ ಔಷಧಿಯಾಗಿದ್ದು, ಈ ಔಷಧಿ ಸುಲಭವಾಗಿ ಸಿಗದಂತೆ ಕೃತಕ ಅಭಾವ ಸೃಷ್ಟಿಸುತ್ತಿರುವವರನ್ನು ಪತ್ತೆ ಹಚ್ಚೆ ಅವರ ವಿರುದ್ಧ ಕ್ರಮಗಳನ್ನು ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. 

ಕೋವಿಡ್ ಸೋಂಕಿನಿಂದ ಹೊರಬರಲು ಈ ಔಷಧಿ ಪರಿಣಾಮಕಾರಿಯಾಗಿದೆ. ಈ ಔಷಧ ಬಹಳಷ್ಟು ಜನರ ಪ್ರಾಣ ಉಳಿಸುತ್ತಿದೆ. ಅದನ್ನು ಕೃತಕ ಅಭಾವ ಸೃಷ್ಟಿಸಿ ಬ್ಲಾಕ್ ಮಾರುಕಟ್ಟೆಯಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿವೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ತಿಳಿಸಿದ್ದಾರೆ. 

ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿದ್ದು, ಈ ನಡುವಲ್ಲೇ ಮಹಾರಾಷ್ಟ್ರ, ಕೇರಳ ಸೇರಿದಂತೆ ನೆರೆ ರಾಜ್ಯಗಳಿಂದ ರಾಜ್ಯಕ್ಕೆ ಆಗಮಿಸುತ್ತಿರುವ ವಲಸಿಗರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇದರಿಂದ ಸೋಂಕು ಮತ್ತಷ್ಟು ಉಲ್ಬಣಗೊಳ್ಳುವ ಆತಂಕ ಶುರುವಾಗಿದೆ.

 ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಕರ್ನಾಟಕಕ್ಕೆ ಬರುವ ವೇಳೆ ಗಡಿ ಭಾಗದಲ್ಲಿ ಸಾಕಷ್ಟು ಪರೀಕ್ಷಾ ಕೇಂದ್ರಗಳಿರುವ ಕುರಿತು ಆರೋಗ್ಯ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗುತ್ತಿದೆ. ಹೊರರಾಜ್ಯದಿಂದ ಬರುವ ಎಲ್ಲಾ ಪ್ರಯಾಣಿಕರಿಗೂ ಆರ್'ಟಿ-ಪಿಸಿಆರ್ ಪರೀಕ್ಷೆಯನ್ನು ಕಡ್ಡಾಯ ಮಾಡಲಾಗಿದೆ ಎಂದಿದ್ದಾರೆ. 

ಇದೇ ವೇಳೆ ನೈಟ್ ಕರ್ಫ್ಯೂ ಬಗ್ಗೆ ಮಾತನಾಡಿದ ಅವರು, ಜನರ ಸಹಕಾರ ಅತ್ಯಂತ ಮುಖ್ಯವಾಗಿದೆ. ಈ ವರೆಗೂ ಪೊಲೀಸರ 450 ಮಂದಿ ಕುಟುಂಬ ಸದಸ್ಯರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಸೋಂಕು ತಗುಲಿದ ಪೊಲೀಸ್, ಅಗ್ನಿ ಶಾಮಕ ದಳ, ಗೃಹ ರಕ್ಷಣಾ ದಳ, ಕಾರಾಗೃಹಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಿಗೆ ಅಗತ್ಯ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ. ಸೋಂಕಿಗೊಳಗಾದ ಪೊಲೀಸ್ ಸಿಬ್ಬಂದಿ ಹಾಗೂ ಕುಟುಂಬಸ್ಥರ ನೆರವಾಗಲು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಧಿಕಾರಿಯೊಬ್ಬರಿಗೆ ಜವಾಬ್ದಾರಿ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com