ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ

ಮುಖ್ಯಮಂತ್ರಿ ಬಿಎಸ್'ವೈ ಆರೋಗ್ಯ ಸ್ಥಿರ: ಮುಂದುವರೆದ ವೈದ್ಯಕೀಯ ಚಿಕಿತ್ಸೆ

ಮಹಾಮಾರಿ ಕೊರೋನಾ ವೈರಸ್ ಸೋಂಕಿಗೊಳಗಾಗಿ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. 

ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ಸೋಂಕಿಗೊಳಗಾಗಿ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. 

ಶುಕ್ರವಾರವಷ್ಟೇ ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಬಳಿಕ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. 

ಶುಕ್ರವಾರ ತಡರಾತ್ರಿವರೆಗೂ ವಿವಿಧ ಪರೀಕ್ಷೆಗಳನ್ನು ನಡೆಸಲಾಗಿದ್ದು, ಆರೋಗ್ಯದಲ್ಲಿ ಯಾವುದೇ ರೀತಿಯ ವ್ಯತ್ಯಾಸಗಳೂ ಕಂಡು ಬಂದಿಲ್ಲ. ಶ್ವಾಸಕೋಶದಲ್ಲಿ ಸಣ್ಣ ಪ್ರಮಾಣದ ಸೋಂಕಿನ ಲಕ್ಷಣಗಳು ಮಾತ್ರ ಕಾಣಿಸಿಕೊಂಡಿವೆ. ಕೊರೋನಾ ಮಾರ್ಗಸೂಚಿಯಂತೆ ಚಿಕಿತ್ಸೆ ನೀಡಲಾಗುತ್ತಿದೆ. ತಜ್ಞ ವೈದ್ಯರ ತಂಡ ಮುಖ್ಯಮಂತ್ರಿಗಳ ಆರೋಗ್ಯದ ಮೇಲೆ ನಿಗಾ ಇರಿಸಿದೆ ಎಂದು ತಿಳಿದುಬಂದಿದೆ. 

ಮುಖ್ಯಮಂತ್ರಿಗಳು ಸಂಪೂರ್ಣವಾಗಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಹೀಗಾಗಿ ಕಚೇರಿಯ ಯಾವುದೇ ಅಧಿಕೃತ ಕೆಲಸಗಳನ್ನೂ ಕೈಗೆತ್ತಿಕೊಳ್ಳುತ್ತಿಲ್ಲ. ಅಧಿಕಾರಿಗಳು ಹಾಗೂ ಸಚಿವರು ಯಾರೊಂದಿಗೂ ಮಾತುಕತೆಗಳನ್ನು ನಡೆಸುತ್ತಿಲ್ಲ. ಆಸ್ಪತ್ರೆಯಲ್ಲಿ ದಿನಪತ್ರಿಕೆ ಹಾಗೂ ಐಪಿಎಲ್ ಕ್ರಿಕೆಟ್ ನೋಡುತ್ತಾ ಕಾಲ ಕಳೆಯುತ್ತಿದ್ದಾರೆಂದು ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದೆ. 

Related Stories

No stories found.

Advertisement

X
Kannada Prabha
www.kannadaprabha.com