ರಾಜ್ಯದ 33 ಆಸ್ಪತ್ರೆಗಳಿಗೆ ರೆಮ್ಡೆಸಿವಿರ್ ಔಷಧ ಪೂರೈಕೆ: ಸಚಿವ ಸುಧಾಕರ್

ಕೋವಿಡ್'ಗೆ ರೆಮ್ಡೆಸಿವಿರ್ ಪರಿಣಾಮಕಾರಿ ಔಷಧಿಯಾಗಿದ್ದು, ಈ ಔಷಧಿಯನ್ನು ರಾಜ್ಯದ 33 ಆಸ್ಪತ್ರೆಗಳಿಗೆ ಪೂರೈಕೆ ಮಾಡಲಾಗುತ್ತದೆ ಎಂದು ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಅವರು ಹೇಳಿದ್ದಾರೆ. 
ಸುಧಾಕರ್
ಸುಧಾಕರ್
Updated on: 

ಬೆಂಗಳೂರು: ಕೋವಿಡ್'ಗೆ ರೆಮ್ಡೆಸಿವಿರ್ ಪರಿಣಾಮಕಾರಿ ಔಷಧಿಯಾಗಿದ್ದು, ಈ ಔಷಧಿಯನ್ನು ರಾಜ್ಯದ 33 ಆಸ್ಪತ್ರೆಗಳಿಗೆ ಪೂರೈಕೆ ಮಾಡಲಾಗುತ್ತದೆ ಎಂದು ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಅವರು ಹೇಳಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನ ಲ್ಲಿ ಟ್ವೀಟ್ ಮಾಡಿರುವ ಅವರು, ರಾಜ್ಯದ ಸುಮಾರು 33 ಆಸ್ಪತ್ರೆಗಳು ರೆಮ್ಡೆಸಿವಿರ್ ಔಷಧ ಪೂರೈಕೆಗೆ ಬೇಡಿಕೆ ಇಟ್ಟಿದ್ದು, ಪ್ರತಿ ಆಸ್ಪತ್ರೆಗೆ 100 ವೈಯಲ್ ಗಳಷ್ಟು ಔಷಧ ಸರಬರಾಜು ಮಾಡಲಾಗುತ್ತದೆ ಎಂದು ಹೇಳಿದ್ದಾರೆ. 

ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದಂತೆಯೇ ರೆಮ್'ಡೆಸಿವರ್ ಔಷಧಿಗೂ ಬೇಡಿಕೆ ಹೆಚ್ಚಾಗುತ್ತಿದೆ, ಪ್ರಮುಖವಾಗಿ ಬೆಂಗಳೂರಿನಲ್ಲಿ ಔಷಧಿಗೆ ಹೆಚ್ಚಿನ ಬೇಡಿಕೆ ಇದೆ ಎಂದು ಮೂಲಗಳೂ ತಿಳಿಸಿವೆ. ಬೇಡಿಕೆ ಹೆಚ್ಚಾಗುತ್ತಿದ್ದಂತೆಯೇ ಔಷಧಿಯ ಕಾಳಸಂತೆ ಮಾರಾಟ ಕೂಡ ಹೆಚ್ಚಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com