ಕೊಡಗು: ಮಲ್ಲಳ್ಳಿ ಜಲಪಾತಕ್ಕೆ ಬಿದ್ದು ಇಬ್ಬರು ದಾರುಣ ಸಾವು

ಜಲಪಾತಕ್ಕೆ ಬಿದ್ದು ಇಬ್ಬರು ದಾರುಣ ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಮಲ್ಲಳ್ಳಿ ಜಲಪಾತದಲ್ಲಿ ನಡೆದಿದೆ.
ಮೃತ ದಿವ್ಯಾ ಹಾಗೂ ಶಶಿಕುಮಾರ್
ಮೃತ ದಿವ್ಯಾ ಹಾಗೂ ಶಶಿಕುಮಾರ್
Updated on

ಮಡಿಕೇರಿ: ಜಲಪಾತಕ್ಕೆ ಬಿದ್ದು ಇಬ್ಬರು ದಾರುಣ ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಮಲ್ಲಳ್ಳಿ ಜಲಪಾತದಲ್ಲಿ ನಡೆದಿದೆ.

ಭಾನುವಾರ ನಡೆದ ಘಟನೆಯಲ್ಲಿ ಸುಂಟಿಕೊಪ್ಪದ ಶಶಿಕುಮಾರ್​ (32) ಮತ್ತು ದಿವ್ಯ (20) ಮೃತಪಟ್ಟಿದ್ದಾರೆ.

ಇಂದು ಬೆಳಗ್ಗೆ 9.30 ಗಂಟೆ ಸುಮಾರಿಗೆ ವೀಕೆಂಡ್​ ಹಿನ್ನೆಲೆಯಲ್ಲಿ ಆರು ಜನರ ತಂಡ ಜಲಪಾತಕ್ಕೆ ಆಗಮಿಸಿದ್ದು ಈ ವೇಳೆ ದಿವ್ಯಾ ಆಯತಪ್ಪಿ ಜಲಪಾತಕ್ಕೆ ಬಿದ್ದಿದ್ದಾಳೆ. ಈ ವೇಳೆ ನೀರಿನಲ್ಲಿ ಬೀಳುತ್ತಿದ್ದ ದಿವ್ಯಾಳನ್ನು ರಕ್ಷಿಸಲು ತೆರಳಿದ ಶಶಿಕುಮಾರ್ ಸಹ ಸಾವಿಗೀಡಾಗಿದ್ದಾರೆ.

<strong> ಮಲ್ಲಳ್ಳಿ ಜಲಪಾತ</strong>
 ಮಲ್ಲಳ್ಳಿ ಜಲಪಾತ

ಘಟನಾ ಸ್ಥಳಕ್ಕೆ ಸೋಮವಾರಪೇಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com