ಸಾರಿಗೆ ಮುಷ್ಕರ: ಕೋಡಿಹಳ್ಳಿ ಚಂದ್ರಶೇಖರ್ ಸೇರಿ 17 ಮಂದಿ ವಿರುದ್ಧ ಎಫ್ಐಆರ್, 200 ಸಿಬ್ಬಂದಿ ವಜಾ

ಸಾರಿಗೆ ಸಂಸ್ಥೆ ಸಿಬ್ಬಂದಿಯನ್ನು ಪ್ರಚೋದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಕರ್ ಸೇರಿದಂತೆ 17 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. 
ಕೋಡಿಹಳ್ಳಿ ಚಂದ್ರಶೇಖರ್
ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು: ಸಾರಿಗೆ ಸಂಸ್ಥೆ ಸಿಬ್ಬಂದಿಯನ್ನು ಪ್ರಚೋದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಕರ್ ಸೇರಿದಂತೆ 17 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. 

ಕಾನೂನುಬಾಹಿರವಾಗಿ ಮುಷ್ಕರ ನಡೆಸಿ ಸಂಸ್ಥೆಗೆ ನಷ್ಟವನ್ನುಂಟು ಮಾಡಿದ ಆರೋಪದಡಿ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ 17 ಮಂದಿ ವಿರುದ್ಧ ಬೆಂಗಳೂರಿನ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಬಿಎಂಟಿಸಿ ಭದ್ರತಾ ಮುತ್ತು ಜಾಗೃತ ಶಾಖೆಯ ವಿಭಾಗೀಯ ಭದ್ರಾತಾ ನಿರೀಕ್ಷಕ ಕೆಎಂ ಮುನಿಕೃಷ್ಣ ದೂರು ದಾಖಲಿಸಿದ್ದಾರೆ. 

ಈ ದೂರಿನಂತೆ ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ, ವಿಪತ್ತು ನಿರ್ವಹಣಾ ಕಾಯ್ದೆ, ಅಕ್ರಮ ಕೂಟ, ಜೀವ ಬೆದರಿಕೆ, ಸಾರ್ವಜನಿಕ ಆಸ್ತಿ ಪಾಸಿಗೆ ಹಾನಿ, ಅಪರಾಧಕ್ಕೆ ಕುಮ್ಮಕ್ಕು, ಕರ್ತವ್ಯಕ್ಕೆ ಅಡ್ಡಿ ಆರೋಪಡಿ ಪ್ರಕರಣ ದಾಖಲಿಸಿದ್ದು ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಇನ್ನು ಇಂದು ಕರ್ತವ್ಯಕ್ಕೆ ಹಾಜರಾಗದ 200 ಮಂದಿ ಸಾರಿಗೆ ಸಿಬ್ಬಂದಿಯನ್ನು ವಜಾ ಮಾಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com