ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ: ಒಂದೇ ದಿನ 149 ಬಲಿ, 21,794 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಒಂದೇ ದಿನ ಬರೋಬ್ಬರಿ 149 ಮಂದಿ ಬಲಿಯಾಗಿದ್ದಾರೆ. ಇನ್ನು ದಾಖಲೆಯ 21,794 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಕೋವಿಡ್ ಪರಿಣಾಮ: ನಿರಂತರ ಶವಸಂಸ್ಕಾರದ ಬಿಸಿಗೆ ಕರಗುತ್ತಿವೆ ಸ್ಮಶಾನದ ಲೋಹದ ಕಟ್ಟುಗಳು!
ಕೋವಿಡ್ ಪರಿಣಾಮ: ನಿರಂತರ ಶವಸಂಸ್ಕಾರದ ಬಿಸಿಗೆ ಕರಗುತ್ತಿವೆ ಸ್ಮಶಾನದ ಲೋಹದ ಕಟ್ಟುಗಳು!
Updated on: 

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಒಂದೇ ದಿನ ಬರೋಬ್ಬರಿ 149 ಮಂದಿ ಬಲಿಯಾಗಿದ್ದಾರೆ. ಇನ್ನು ದಾಖಲೆಯ 21,794 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 21,794 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 11,98,644ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇಂದು ರಾಜ್ಯದಲ್ಲಿ ಒಂದೇ ದಿನ 149 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 13,646ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 13,782 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 5,70,035ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 92 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 4,571 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 10,25,821ಕ್ಕೆ ಏರಿಕೆಯಾಗಿದೆ. ಇನ್ನು 1,59,158 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 751 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com