ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಶಿಕ್ಷಣ ಇಲಾಖೆ ಮಾರ್ಗಸೂಚಿ ಪ್ರಕಟ

ಇದೇ 28ರಿಂದ 'ದ್ವಿತೀಯ ಪಿಯುಸಿ' ಪ್ರಾಯೋಗಿಕ ಪರೀಕ್ಷೆ ನಡೆಸುವುದಕ್ಕೆ ಅನುವಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಇದೇ 28ರಿಂದ 'ದ್ವಿತೀಯ ಪಿಯುಸಿ' ಪ್ರಾಯೋಗಿಕ ಪರೀಕ್ಷೆ ನಡೆಸುವುದಕ್ಕೆ ಅನುವಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.

ಇದೇ 28ರಿಂದ ಮೇ 18ರವರೆಗೆ ನಡೆಯಬೇಕಿರುವ 2021 ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ನಡೆಸಲು ಎಲ್ಲಾ ಉಪ ನಿರ್ದೇಶಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ಪ್ರಾಯೋಗಿಕ ಪರೀಕ್ಷೆಗಳನ್ನು ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಕಾಲೇಜುಗಳಲ್ಲಿಯೇ ನಡೆಸಲು ತೀರ್ಮಾನಿಸಿರುವುದರಿಂದ, ವಿದ್ಯಾರ್ಥಿಗಳಿಗೆ ಈ ಬಗ್ಗೆ ಮಾಹಿತಿ ತಲುಪಿಸಲು ಕ್ರಮ ಕೈಗೊಳ್ಳುವುದು, ಯಾವುದೇ ವಿದ್ಯಾರ್ಥಿ ಪರೀಕ್ಷೆಯಿಂದ ವಂಚಿತರಾದರೆ ಇದಕ್ಕೆ ಪ್ರಾಂಶುಪಾಲರೇ ನೇರ ಹೊಣೆಯಾಗಲಿದ್ದಾರೆ ಎಂದು ಎಚ್ಚರಿಸಲಾಗಿದೆ.

ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಯಿಂದ ಕೋವಿಡ್ ವರದಿ ಪಡೆಯಬಾರದು, ಕಾಲೇಜಿಗೆ ಪರೀಕ್ಷೆ ಹಾಜರಾಗುವ ವಿದ್ಯಾರ್ಥಿಗಳ ದೇಹದ ಉಷ್ಣತೆ ಪರೀಕ್ಷಿಸಿ ಒಳಗೆ ಪ್ರವೇಶ ನೀಡಬೇಕು, ಪ್ರತಿ ದಿನ ಪರೀಕ್ಷೆ ಮುಗಿದ ನಂತರ ತಮಗೆ ನಿಯೋಜಿಸಿದ ಪರೀಕ್ಷಾ ಕೇಂದ್ರದಲ್ಲಿ ಆನ್ ಲೈನ್ ಮೂಲಕ ಅಂಕಗಳನ್ನು ನಮೂದಿಸಲು ಆಯಾಯ ಕಾಲೇಜಿನ ಪ್ರಾಂಶುಪಾಲರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದೂ ಸುತ್ತೊಲೆಯಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com