ಡಾ.ಸಿ. ಎನ್. ಅಶ್ವತ್ ನಾರಾಯಣ
ರಾಜ್ಯ
ಪರೀಕ್ಷೆ ಮುಗಿಯುವ ತನಕ ಹಾಸ್ಟೆಲ್ ವಿದ್ಯಾರ್ಥಿಗಳನ್ನು ಖಾಲಿ ಮಾಡಿಸಬಾರದು: ಡಾ. ಅಶ್ವತ್ ನಾರಾಯಣ
ಹಾಸ್ಟೆಲ್‌ನಲ್ಲಿದ್ದು, ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಪರೀಕ್ಷೆ ಮುಗಿಯುವ ತನಕ ಖಾಲಿ ಮಾಡಿಸಬಾರದು ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ ನಾರಾಯಣ ಹೇಳಿದ್ದಾರೆ.
ಬೆಂಗಳೂರು: ಹಾಸ್ಟೆಲ್‌ನಲ್ಲಿದ್ದು, ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಪರೀಕ್ಷೆ ಮುಗಿಯುವ ತನಕ ಖಾಲಿ ಮಾಡಿಸಬಾರದು ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ ನಾರಾಯಣ ಹೇಳಿದ್ದಾರೆ.
ಹಾಸ್ಟೆಲ್‌ನಲ್ಲಿ ಉಳಿದುಕೊಂಡು ಪರೀಕ್ಷೆ ಬರೆಯುತ್ತಿರುವ ಇಂಜಿನಿಯರಿಂಗ್, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳನ್ನು ಪರೀಕ್ಷೆ ಮುಗಿಯುವ ತನಕ ಬಲವಂತವಾಗಿ ಖಾಲಿ ಮಾಡಿಸಬಾರದು. ಬದಲಿಗೆ ಆಹಾರ ಸೇರಿದಂತೆ ಎಲ್ಲಾ ರೀತಿಯ ಸೌಕರ್ಯಗಳನ್ನು ಒದಗಿಸಬೇಕೆಂದು ಅವರು ಟ್ವೀಟ್ ಮಾಡಿದ್ದಾರೆ.
ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ವಿದ್ಯಾರ್ಥಿಗಳ ಅಧ್ಯಯನಕ್ಕೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಕಾಲೇಜ್ ಆಡಳಿತಕ್ಕೆ ಸೂಚನೆ ಉಪ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ